ಕ್ಲಸ್ಟರ್ಮಟ್ಟದ ಪ್ರತಿಭಾ ಕಾರಂಜಿ
ಅಣ್ಣಿಗೇರಿ: ಜಿಪಂ ಧಾರವಾಡ, ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯ, ಸಮೂಹ ಸಂಪನ್ಮೂಲ ಕೇಂದ್ರ ಅಣ್ಣಿಗೇರಿ ಸಂಯೋಗದಲ್ಲಿ ಸ್ಥಳೀಯ ಎನ್.ಎಸ್. ಹುಬ್ಬಳ್ಳಿ ಬಾಲಕಿಯರ ಪ್ರೌಢಶಾಲೆಯಲ್ಲಿ 2013-14ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರೌಢಶಾಲೆ ಮಕ್ಕಳ ಪ್ರತಿಭಾ ಕಾರಂಜಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಿ.ಜಿ. ಬನ್ನಿಕೊಪ್ಪ ಮಕ್ಕಳಲ್ಲಿ ಪಠ್ಯೇತರ ಚಟುವಟಿಕೆ ಹೊರತುಪಡಿಸಿ ಇನ್ನಿತರ ಚಟುವಟಿಕೆಯನ್ನು ಗುರ್ತಿಸುವ ಹಿನ್ನೆಲೆಯಲ್ಲಿ ಕೈಗೊಂಡ ಪ್ರತಿಭಾ ಕಾರಂಜಿ ಕಾರ್ಯಕ್ರಮ ಶ್ಲಾಘನೀಯವೆಂದರು.
ಅಧ್ಯಕ್ಷತೆ ವಹಿಸಿದ್ದ ಎಲ್.ವಿ. ಸಾಲಿಮಠ ಮಾತನಾಡಿ, ಪ್ರತಿಭಾ ಕಾರಂಜಿ, ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರ್ತಿಸಿ, ಸ್ಫೂರ್ತಿ, ಪ್ರೋತ್ಸಾಹ, ತುಂಬುವುದರ ಜೊತೆಗೆ ಉತ್ತಮ ರೀತಿಯಲ್ಲಿ ಪ್ರತಿಭೆಯನ್ನು ಬೆಳೆಸುವಲ್ಲಿ ಸಹಕಾರಿಯಾಗುತ್ತದೆ ಎಂದು ಹೇಳಿದರು.
ಎನ್.ಎಸ್. ಮೇಲ್ಮುರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಟ್ಟಣದ ಎಲ್ಲ ಪ್ರೌಢಶಾಲೆ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾಷಣ, ಚರ್ಚಾಸ್ಪರ್ಧೆ, ಧಾರ್ಮಿಕ ಪಠಣ, ಭರತನಾಟ್ಯ, ಛದ್ಮವೇಷ, ಕ್ಲೆ ಮಾಡಲಿಂಗ್, ಆಶುಭಾಷಣ, ಮಿಮಿಕ್ರಿ, ಪ್ರಬಂಧ, ಚಿತ್ರಕಲೆ, ರಂಗೋಲಿ, ಗಝಲ್, ನಾಟಕ, ಕ್ವಿಜ್, ಕವಾಲಿ, ಜಾನಪದ ನೃತ್ಯ, ಕೋಲಾಟ, ಯೋಗಾಸನ, ಶಾಸ್ತ್ರೀಯ ಸಂಗೀತ, ಜಾನಪದಗೀತೆ, ಭಾವಗೀತೆ, ವಿಜ್ಞಾನ ಮಾದರಿ ತಯಾರಿಕೆ ಇತ್ಯಾದಿ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರು ಪ್ರಮಾಣ ಪತ್ರ ಪಡೆದರು.
ಎಸ್.ಎ. ಕನಕರಡ್ಡಿ ನಿರೂಪಿಸಿದರು. ಎ.ಐ. ಪಾಪಣ್ಣವರ ವಂದಿಸಿದರು. ಶಿಕ್ಷಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

