ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ
ಹುಬ್ಬಳ್ಳಿ: ಹಳೆಹುಬ್ಬಳ್ಳಿಯ ಎಸ್.ಎಂ. ಕೃಷ್ಣಾನಗರದಲ್ಲಿರುವ ರಾಜೀವ ಗಾಂಧಿ ಎಜ್ಯುಕೇಶನ್ ಟ್ರಸ್ಟ್ನಲ್ಲಿ ಇತ್ತೀಚೆಗೆ ಇಂಡಿಪಂಪ್ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಉದ್ಘಾಟನಾ ಸಮಾರಂಭ ಜರುಗಿತು.
ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಹಾಗೂ ವಿಧಾನಪರಿಷತ್ ಸದಸ್ಯ ನಾಗರಾಜ ಛಬ್ಬಿ ಉದ್ಘಾಟಕರಾಗಿ ಆಗಮಿಸಿದ್ದರು.
ಅನಂತರ ಮಾತನಾಡಿದ ಉಭಯ ಶಾಸಕರು, ವಿದ್ಯಾರ್ಥಿಗಳಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಯನ್ನು ತೋರ್ಪಡಿಸಲು ಪ್ರತಿಭಾ ಕಾರಂಜಿ ಸ್ಪರ್ಧೆ ಉತ್ತಮ ವೇದಿಕೆಯಾಗಿದೆ ಎಂದರು. ವಿದ್ಯಾರ್ಥಿಗಳು ಇಂತಹ ಸ್ಪರ್ಧೆಯಲ್ಲಿ ಹೆಚ್ಚೆಚು ಪಾಲ್ಗೊಳ್ಳುವ ಮೂಲಕ ಜ್ಞಾನ ವೃದ್ಧಿಸಿಕೊಳ್ಳಬೇಕೆಂದರು.
ರಾಜೀವ ಗಾಂಧಿ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷ ಸುಧೀರ ಎಂ. ಸಾದರಹಳ್ಳಿ ಅಧ್ಯಕ್ಷತೆವಹಿಸಿದ್ದರು. ಅತಿಥಿಯಾಗಿ ಪಾಲಿಕೆ ಸದಸ್ಯ ಅಲ್ತಾಫ್ನವಾಜ್ ಕಿತ್ತೂರ, ಯು.ಬಿ. ಭೀಮಕ್ಕನವರ, ಎಸ್.ಜಿ. ಮಣಕೂರ, ಜಿ.ಎಚ್. ರಂಗ್ರೇಜ್, ಆರ್.ಆರ್. ಪೂಜಾರ, ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎನ್.ಯು. ಬದ್ದಿ, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ಎಂ. ತಟ್ಟಿಮನಿ, ರಜನಿ ಗಲಗಲಿ, ಇ.ಪಿ. ಬಾನಿಕಟ್ಟಿ ಮತ್ತಿತರರು ಉಪಸ್ಥಿತರಿದ್ದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

