ಕಲಾಭವನ, ಮನ್ಸೂರು ಅಭಿವೃದ್ಧಿಗೊಳಿಸಿ
ಧಾರವಾಡ: ಖ್ಯಾತ ಹಿಂದೂಸ್ತಾನಿ ಗಾಯಕ ಮಲ್ಲಿಕಾರ್ಜುನ ಮನ್ಸೂರ ಹೆಸರಿನ ಕಲಾಭವನ ಹಾಗೂ ಅವರ ಹುಟ್ಟೂರು ಮನ್ಸೂರು ಗ್ರಾಮದ ಅಭಿವೃದ್ಧಿ ಕಾರ್ಯ ಅರ್ಧಕ್ಕೆ ನಿಂತಿದ್ದು ಪೂರ್ತಿಗೊಳಿಸಬೇಕೆಂದು ಸಂಸದ ಪ್ರಹ್ಲಾದ ಜೋಶಿ ಮನವಿ ಮಾಡಿದರು.
ಇಲ್ಲಿನ ಕರ್ನಾಟಕ ಕಲಾ ಕಾಲೇಜಿನಲ್ಲಿ ನಡೆದ ಧಾರವಾಡ ಉತ್ಸವದ ಉದ್ಘಾಟನೆ ವೇಳೆ ಮಾತನಾಡಿದ ಅವರು, ಕಲಾಭವನ ಹಾಗೂ ಮನ್ಸೂರು ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಚಾಲನೆ ನೀಡಿದ್ದು, ಈಗಾಗಲೇ ಅರ್ಧ ಹಣ ಬಿಡುಗಡೆಯಾಗಿದೆ. ಇನ್ನುಳಿದ ಹಣವನ್ನು ಶೀಘ್ರ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.
ಈ ಭಾಗದಲ್ಲಿ ಸಾಕಷ್ಟು ಪ್ರಮಾಣದ ಕಲಾವಿದರಿದ್ದಾರೆ. ಅವರ ಪ್ರತಿಭೆ ಹೊರಹಾಕಲು ದೂರದರ್ಶನ ಕೇಂದ್ರವನ್ನು ಪೂರ್ಣ ಪ್ರಮಾಣದ ಕೇಂದ್ರವನ್ನಾಗಿಸಿ, ಕೇಂದ್ರದಲ್ಲಿ ಕಾರ್ಯಕ್ರಮಗಳು ತಯಾರು ಆಗುವಂತೆ ಗಮನ ಹರಿಸಬೇಕೆಂದರು.
ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಉಕದವರೇ ಆದ ನೀವು ಹೆಚ್ಚಿನ ಆಸಕ್ತಿ ವಹಿಸಿ ಈ ಭಾಗದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಬೇಕೆಂದು ಸಚಿವೆ ಉಮಾಶ್ರೀಗೆ ಹೇಳಿದರು.
ಶಾಸಕರಾದ ವಿನಯ ಕುಲಕರ್ಣಿ ಹಾಗೂಅರವಿಂದ ಬೆಲ್ಲದ ಮಾತನಾಡಿ, ಸಂಗೀತದ ತವರೂರು ಧಾರವಾಡದಲ್ಲಿ ಉತ್ಸವ ನಡೆಯುತ್ತಿದ್ದು, ಈ ಉತ್ಸವದಲ್ಲಿ ಒಂದು ದಿನವಾದರೂ ಅಹೋರಾತ್ರಿ ಸಂಗೀತೋತ್ಸವ ಏರ್ಪಡಿಸಬೇಕು. ಪೂನಾ ಮಾದರಿಯಲ್ಲಿ ಇಲ್ಲಿಯೂ ಮೂರು ದಿನಗಳ ಕಾಲ ಅಹೋರಾತ್ರಿ ಸಂಗೀತೋತ್ಸವ ನಡೆಯಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

