ಆಶ್ರಯ ಮನೆ ವಿತರಿಸಿ
ಹುಬ್ಬಳ್ಳಿ: ಬ್ಯಾಹಟ್ಟಿ ತಾಪಂ ವ್ಯಾಪ್ತಿಯ ಹನಸಿ ಗ್ರಾಮದ ಬಳಿ ಆಶ್ರಯ ಯೋಜನೆಗೆ ಮೀಸಲು ಇರಿಸಿರುವ 7 ಎಕರೆ ಜಾಗವನ್ನು ಹರಣಶಿಕಾರಿ ಕುಟುಂಬಗಳಿಗೆ ಆಶ್ರಯ ಯೋಜನೆಯಡಿ ವಿತರಿಸಬೇಕು ಎಂದು ಶುಕ್ರವಾರ ಧಾರವಾಡ ಜಿಲ್ಲಾ ಬಹುಜನ ಸಮಾಜ ಪಕ್ಷದಿಂದ ಮನವಿ ಸಲ್ಲಿಸಲಾಯಿತು.
ಸರ್ಕಾರ ವಶಪಡಿಸಿಕೊಂಡಿರುವ 7 ಎಕರೆ ಜಮೀನಿನಲ್ಲಿ ಈಗಾಗಲೇ ಹರಣಶಿಕಾರಿ ಸಮುದಾಯ ಗುಡಿಸಲು ಹಾಕಿಕೊಂಡು ವಾಸಿಸುತ್ತಿದ್ದು, ಮೂಲಸೌಕರ್ಯಗಳಿಂದ ವಂಚಿತವಾಗಿರುವ ಈ ಸಮುದಾಯಕ್ಕೆ ಅಗತ್ಯ ಸೌಲಭ್ಯ ಕಲ್ಪಿಸುವುದರ ಜೊತೆಗೆ ಆ ಜಾಗದಲ್ಲಿ ಆಶ್ರಯ ಯೋಜನೆಯಡಿ ಮನೆ ನಿರ್ಮಿಸಿಕೊಡಬೇಕು. ಆಶ್ರಯ ಯೋಜನೆಯಡಿ ಅನರ್ಹ ಫಲಾನುಭವಿಗಳು ಆಯ್ಕೆ ಮಾಡುವ ಮೂಲಕ ಭ್ರಷ್ಟಾಚಾರ ಎಸಗಲಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಬಿಎಸ್ಪಿ ಮುಖಂಡ ಪ್ರೇಮನಾಥ ಚಿಕ್ಕತುಂಬಳ, ಬಸವರಾಜ ಹೊಸಮನಿ, ರೇವಣಸಿದ್ಧಪ್ಪ ಹೊಸಮನಿ, ಹನುಮಂತಪ್ಪ ತಗರಗುಂಟಿ, ರಾಜು ವಾಲ್ಮೀಕಿ, ದೇವೇಂದ್ರಪ್ಪ ಏಣಿನ್ನವರ ಮತ್ತು ಸುರೇಶ ಖಾನಾಪುರ ಇನ್ನಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

