ಸುದ್ದಿ ಸಂಕ್ಷೇಪ
ನ್ಯಾ. ಮುರಗೇಶನ್ನೇಮಕ: ಕರವೇ ವಿರೋಧ
ಧಾರವಾಡ: ನ್ಯಾಯಮೂರ್ತಿ ಡಿ. ಮುರಗೇಶನ್ ಅವರನ್ನು ಮಾನವ ಹಕ್ಕು ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಶೆಟ್ಟಿ ಬಣ) ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು. ನ್ಯಾ. ಡಿ. ಮುರಗೇಶನ್ ತಮಿಳು ಭಾಷಿಕರಾಗಿರುವುದರಿಂದ ಅವರಿಗೆ ಕನ್ನಡ ಭಾಷೆಯ ಅರಿವಿಲ್ಲ. ಆದರೂ ಸರ್ಕಾರ ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷರನ್ನಾಗಿ ಮಾಡಲು ಮುಂದಾಗಿದೆ. ಮುಖ್ಯವಾಗಿ ಅವರಿಗೆ ಕನ್ನಡ ಭಾಷೆಯೇ ಬರುವುದಿಲ್ಲ. ಇಂತಹ ಸಂದರ್ಭದಲ್ಲಿ ರಾಜ್ಯದ ವಿವಿಧ ನಗರ ಹಾಗೂ ಗ್ರಾಮೀಣ ಪ್ರದೇಶಗಳ ದೂರುಗಳಿಗೆ ಸೂಕ್ತ ಸ್ಪಂದನೆ ದೊರೆಯುವುದು ಕಷ್ಟ. ಆದ್ದರಿಂದ ಅವರನ್ನು ಆಯೋಗದ ಅಧ್ಯಕ್ಷರನ್ನಾಗಿ ಮಾಡಬಾರದು. ಒಂದು ವೇಳೆ ಸರ್ಕಾರ ಅವರನ್ನೇ ಅಧ್ಯಕ್ಷರನ್ನಾಗಿ ನೇಮಕ ಮಾಡಿದರೆ, ಕರವೇ ವತಿಯಿಂದ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಪ್ರತಿಭಟನಾಕಾರು ಎಚ್ಚರಿಸಿದ್ದಾರೆ. ಸಂಘಟನೆಯ ಜಿಲ್ಲಾಧ್ಯಕ್ಷ ಶಿವಾಜಿ ಡೆಂಬ್ರೆ, ರವಿ ಭೀಮಕ್ಕನವರ, ಕೃಷ್ಣಾ ತಿಬೇಲಿ, ರಾಜು ಗುಡುದೂರ, ಸಾವನ ತಲೇಕರ್, ಬಾಲು ಗೂಳಪ್ಪನವರ, ಉಸ್ಮಾನ ಮಿರಜಕರ್, ಮಹಾದೇವ ದೋಳಿಕೊಪ್ಪ, ಮಲ್ಲಿಕಾರ್ಜುನ ಘಾಟೀನ, ಬಸವರಾಜ ವಕ್ಕುಂದ ಮತ್ತಿತರು ಪ್ರತಿಭಟನೆಯಲ್ಲಿ ಇದ್ದರು.
27ರಿಂದ ಧಾರವಾಡದಲ್ಲಿ ಶರಣ ಸಾಹಿತ್ಯ ಸಮ್ಮೇಳನ
ಬೆಂಗಳೂರು: ಧಾರವಾಡದ ಮುರುಘಾಮಠದ ಆವರಣದಲ್ಲಿ ಡಿ. 27, 28, 29ರಂದು ಅಖಿಲ ಭಾರತ 11ನೇ ಶರಣ ಸಾಹಿತ್ಯ ಸಮ್ಮೇಳನ ಏರ್ಪಡಿಸಲಾಗಿದೆ ಎಂದು ಸಾಹಿತಿ. ಗೊ.ರು. ಚನ್ನಬಸಪ್ಪ ಹೇಳಿದರು. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕ, ವಿಶ್ರಾಂತ ಪೊಲೀಸ್ ಮಹಾನಿರ್ದೇಶಕ ಡಾ. ಅಜಯ್ಕುಮಾರ್ಸಿಂಗ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ ಎಂದು ಹೇಳಿದರು. ಮೂರು ದಿನಗಳ ಈ ಸಮ್ಮೇಳನವನ್ನು ಡಿ. 27ರಂದು ಬೆಳಿಗ್ಗೆ 11 ಗಂಟೆಗೆ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಗದಗಿನ ತೋಂಟದಾರ್ಯ ಮಠದ ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳು, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಮಹಾಸ್ವಾಮಿಗಳು, ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಉದ್ಘಾಟಿಸಲಿದ್ದಾರೆ ಎಂದರು. ಸಮ್ಮೇಳನಕ್ಕೆ ಬರುವ ಎಲ್ಲರಿಗೂ ಊಟ- ವಸತಿ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

