ಧಾರವಾಡ

ಸಂಕ್ಷಿಪ್ತ ಸುದ್ದಿ

Published On :

ಗ್ರೌಂಡ್ ಬುಕಿಂಗ್ ಸಿಬ್ಬಂದಿ ನೇಮಕ
ಹುಬ್ಬಳ್ಳಿ:  ತಡೆರಹಿತ ಬಸ್‌ಗಳಲ್ಲಿ ಚಾಲಕರೇ ನಿರ್ವಾಹಕರ ಕೆಲಸ ನಿರ್ವಹಿಸುತ್ತಿರುವುದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದ್ದ ಪಕ್ಷದಲ್ಲಿ ಅದನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ವಾಯವ್ಯ ಸಾರಿಗೆ ಸಂಸ್ಥೆ ಮುಖ್ಯ ಸಂಚಾರ ವ್ಯವಸ್ಥಾಪಕ ಎಸ್. ವಿ. ಹುಲಿಯಾಳಕರ ತಿಳಿಸಿದ್ದಾರೆ.  ತಡೆರಹಿತ ಬಸ್‌ನಿಂದ ಪ್ರಯಾಣಿಕರಿಗೆ ಕಿರಿಕಿರಿಯಾಗುತ್ತಿದೆ ಎಂಬ ಸಂಗತಿಯ ಮೇಲೆ 'ಕನ್ನಡಪ್ರಭ' ಬೆಳಕು ಚೆಲ್ಲಿತ್ತು. ಇದನ್ನು ಗಮನಿಸಿದ ಅಧಿಕಾರಿಗಳು ಸೂಕ್ತ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾಗಿ ಹುಲಿಯಾಳಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಾಯವ್ಯ ಸಾರಿಗೆ ಸಂಸ್ಥೆ ಹಾನಿಯಲ್ಲಿದೆ, ಇದನ್ನು ತಪ್ಪಿಸುವ ನಿಟ್ಟಿನಲ್ಲಿ ತಡೆರಹಿತ ಬಸ್‌ಗಳಲ್ಲಿ ಚಾಲಕರು ಮತ್ತು ನಿರ್ವಾಹಕ ಎರಡೂ ಹುದ್ದೆ ನಿರ್ವಹಿಸುವ ಚಾಲಕ ಕಂ ನಿರ್ವಾಹಕರನ್ನು ನೇಮಿಸಿದ್ದೇ ಆದಲ್ಲಿ ಸಂಸ್ಥೆಗೆ ಸಿಬ್ಬಂದಿ ವೇತನ ವೆಚ್ಚದ ಹೊರ ಕಡಿಮೆಯಾಗಲಿದೆ. ಇನ್ನು ಚಾಲಕರನ್ನು ನೇಮಿಸಿಕೊಳ್ಳುವ ಸಂದರ್ಭದಲ್ಲಿ ನಿರ್ವಾಹಕರ ಹುದ್ದೆಯನ್ನೂ ನಿಭಾಯಿಸಬೇಕೆಂಬ ಸೂಚನೆ ನೀಡೇ ನೇಮಕ ಮಾಡಿಕೊಳ್ಳಲಾಗಿದೆ. ಆದರೆ ಪ್ರಯಾಣಿಕರಿಗೆ ಇದರಿಂದ ಆಗುತ್ತಿರುವ ತೊಂದರೆ ತಪ್ಪಿಸಲು 'ಗ್ರೌಂಡ್‌ಬುಕಿಂಗ್‌' ಸಿಬ್ಬಂದಿ ನೇಮಿಸಲಾಗಿದೆ. ಬಸ್ ನಿಲ್ದಾಣದಲ್ಲಿ ಹತ್ತುವ ಹಾಗೂ ಊರಹೊರವಲಯದಲ್ಲಿ ಹತ್ತುವ ಪ್ರಯಾಣಿಕರಿಗೆ ಇವರೇ ಟಿಕೆಟ್ ವಿತರಿಸಲಿದ್ದಾರೆ. ಇದರಿಂದ ಪ್ರಯಾಣಿಕರಿಗಾಗುತ್ತಿರುವ ಅನಾನುಕೂಲ ತಪ್ಪಲಿದೆ ಎಂದು ಎಸ್.ವಿ. ಹುಲಿಯಾಳಕರ ತಿಳಿಸಿದ್ದಾರೆ.
ಪ್ರಮೋದ್ ಮಳ್ಳಿಗಟ್ಟಿ ನಿಧನ
ಶಿವಮೊಗ್ಗ:  ದಿ ಹಿಂದೂ ಪತ್ರಿಕೆಯ ವರದಿಗಾರರಾಗಿ ನಿವೃತ್ತರಾಗಿದ್ದ ಹಿರಿಯ ಪತ್ರಕರ್ತ ಪ್ರಮೋದ್ ಮಳ್ಳಿಗಟ್ಟಿ ಅವರು ಶುಕ್ರವಾರ ತಡರಾತ್ರಿ ನಿಧನರಾದರು. ಅವರಿಗೆ 65 ವರ್ಷ ವಯಸ್ಸಾಗಿದ್ದು, ಪತ್ನಿ, ಇಬ್ಬರು ಪುತ್ರರು ಇದ್ದಾರೆ. ಹಲವು ದಶಕದಿಂದ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದ ಇವರು, ಕಿರಿಯರಿಗೆ ಮಾರ್ಗದರ್ಶಕರಾಗಿದ್ದರು. ಇತ್ತೀಚೆಗೆ ಕೆಲ ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಶುಕ್ರವಾರ ರಾತ್ರಿ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾದರು. ಇವರ ಅಂತ್ಯಕ್ರಿಯೆ ಶನಿವಾರ ಬೆಳಗ್ಗೆ ಶಿವಮೊಗ್ಗದಲ್ಲಿ ನಡೆಯಲಿದೆ. ಇವರ ನಿಧನಕ್ಕೆ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಿವಿಧ ಪತ್ರಿಕಾ ಸಂಸ್ಥೆಗಳು ಸಂತಾಪ ಸೂಚಿಸಿವೆ.
ಸಾವಿತ್ರಮ್ಮ ಫಕ್ಕೀರಯ್ಯ ಹಿರೇಮಠ ನಿಧನ
ನವಲಗುಂದ:  ತಾಲೂಕಿನ ತಡಹಾಳ ಗ್ರಾಮದ ಸಾವಿತ್ರಮ್ಮ ಫಕ್ಕೀರಯ್ಯ ಹಿರೇಮಠ (98) ಶುಕ್ರವಾರ ಬೆಳಗ್ಗೆ ನಿಧನರಾದರು. ಮೃತರಿಗೆ ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗ ಇದ್ದಾರೆ. ಪಿರಿಯಾಪಟ್ಟಣದ ಬೆಟ್ಟದಪುರದ ಶ್ರೀ ಚನ್ನವೀರ ದೇಶೀಕೇಂದ್ರ ಮಹಾಸ್ವಾಮೀಜಿ ಮೃತರ ಪೂರ್ವಾಶ್ರಮದ ಪುತ್ರರಾಗಿದ್ದಾರೆ. ಅಂತ್ಯಕ್ರಿಯೆಯು ಶನಿವಾರ ಮಧ್ಯಾಹ್ನ ತಡಹಾಳ ಗ್ರಾಮದಲ್ಲಿ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.