ಧಾರವಾಡ

ಅಪರಾಧ ಸುದ್ದಿಗಳು

Published On :

ಪಂ. ಬಾಲಚಂದ್ರ ಶಾಸ್ತ್ರಿ ನಿಧನಕ್ಕೆ ಶ್ರದ್ಧಾಂಜಲಿ
ಧಾರವಾಡ: ಪಂ. ಬಾಲಚಂದ್ರ ಶಾಸ್ತ್ರಿ ನಿಧನಕ್ಕೆ ವಿವಿಧ ಭಾಗಗಳಿಂದ ಆಗಮಿಸಿದ ವೇದ ಹಾಗೂ ಶಾಸ್ತ್ರ ವಿದ್ವಾಂಸರು, ಶ್ರದ್ಧಾಂಜಲಿ ಸಮರ್ಪಿಸಿದರು. ಶಂಕರಾಚಾರ್ಯ ಸಂಸ್ಕೃತ ಪಾಠಶಾಲೆಯಲ್ಲಿ ಶಾಸ್ತ್ರಿಗಳ ಶಿಷ್ಯರು, ಅಭಿಮಾನಿಗಳು ಹಾಗೂ ಭಕ್ತರ ಸಮ್ಮಖದಲ್ಲಿ ಈ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿ ವಿ. ವೆಂಕಟೇಶಶಾಸ್ತ್ರಿ ವೀಣಾಕಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಶೃಂಗೇರಿ ಮಠದ ವಿದ್ವಾನ್ ಶಿವಕುಮಾರ ಶರ್ಮಾ ಶಾಸ್ತ್ರಿಗಳು ಭವ್ಯ ಛಾಯಾಚಿತ್ರ ಉದ್ಘಾಟಿಸಿದರು. ಆಂಧ್ರ, ತಮಿಳುನಾಡು, ಕೇರಳ, ಮಹಾರಾಷ್ಟ್ರ ಸೇರಿದಂತೆ ಸುಮಾರು 30 ವಿದ್ವಾಂಸರು ಈ ಗೌರವ ಸಮರ್ಪಣೆ ಕಾರ್ಯದಲ್ಲಿ ಭಾಗವಹಿಸಿದ್ದರು. ಕೂಡ್ಲಿ ಶೃಂಗೇರಿ ಮಹಾ ಸಂಸ್ಥಾನ, ಸ್ವರ್ಣವಲ್ಲಿ ಮಹಾಸಂಸ್ಥಾನ, ರಾಮಚಂದ್ರಾಪುರ ಮಹಾಸಂಸ್ಥಾನ, ಅವನೀ ಶೃಂಗೇರಿ ಮಹಾಸಂಸ್ಥಾನ, ಎಡತೊರೆಯೋಗಾನಂದೇಶ್ವರ ಮಹಾಸಂಸ್ಥಾನ, ಶಾಂತಾನಂದಸ್ವಾಮಿ ಮಹಾಸಂಸ್ಥಾನ, ರಾಮಪ್ಪಯ್ಯ ಸ್ವಾಮಿ ಸಂಸ್ಥಾನ, ಭೀಮಾ ಶಂಕರಮಠ ಸೇರಿದಂತೆ ಸುಮಾರು 50ಕ್ಕೂ ಹೆಚ್ಚು ವಿವಿಧ ಧಾರ್ಮಿಕ ಸಂಘ ಸಂಸ್ಥೆಗಳು ಶಾಸ್ತ್ರಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಡಾ. ವೇಣಿ ಮಾಧವ, ಡಾ. ಭೀಮಾಶಂಕರ, ಶಂಕರ ಕುಲಕರ್ಣಿ ಮತ್ತಿತರು ಇದ್ದರು.
ವೀರಭದ್ರೇಶ್ವರ ಜಾತ್ರಾ ಸಂಭ್ರಮ
ಕನ್ನಡಪ್ರಭ ವಾರ್ತೆ, ಧಾರವಾಡ, ಡಿ. 22
ಇಲ್ಲಿನ ಮದಿಹಾಳದಲ್ಲಿ ಶ್ರೀ ವೀರಭದ್ರೇಶ್ವರ ಜಾತ್ರಾ ಉತ್ಸವ ಇತ್ತೀಚೆಗೆ ಸಡಗರ ಸಂಭ್ರಮದಿಂದ ಯಶಸ್ವಿಯಾಗಿ ಜರುಗಿತು.
ಜಾತ್ರಾಮಹೋತ್ಸವ ಅಂಗವಾಗಿ ಗುಗ್ಗಳ ಕಾರ್ಯಕ್ರಮ ನಡೆಯಿತು. ಅಲ್ಲದೆ, ಸಕಲ ವಾದ್ಯಮೇಳಗಳೊಂದಿಗೆ ಹಾಗೂ ಅಗ್ನಿ ಮಹೋತ್ಸವದೊಂದಿಗೆ ವಿಜೃಂಭಣೆಯಿಂದ ಗುಗ್ಗಳ ಕಾರ್ಯಕ್ರಮ ಜರುಗಿತು. ಜಾತ್ರೆ ನಿಮಿತ್ತ ಏರ್ಪಡಿಸಲಾಗಿದ್ದ ಸಾಮೂಹಿಕ ವಿವಾಹದಲ್ಲಿ ಒಟ್ಟು ನಾಲ್ಕು ಜೊತೆ ವಧು- ವರರು ಗೃಹಸ್ಥಾಶ್ರಮ ಸ್ವೀಕರಿಸಿದರು.
ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಕುಮಾರ ವಿರೂಪಾಕ್ಷ ಸ್ವಾಮೀಜಿ, ಗುರುಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ, ಅಭಿನವಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಶಿವಸಿದ್ದರಾಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಚನ್ನವೀರ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಅತಿಥಿಗಳಾಗಿ ಮಾಜಿ ಶಾಸಕಿ ಸೀಮಾ ಮಸೂತಿ, ಮುಖಂಡ ಮಹೇಶ ಟೆಂಗಿನಕಾಯಿ ಅತಿಥಿಗಳಾಗಿ ಆಗಮಿಸಿದ್ದರು. ವೀರಭದ್ರೇಶ್ವರ ದೇವಸ್ಥಾನ ಅಭಿವೃದ್ಧಿ ಸೇವಾ ಸಮಿತಿಯ ಅಧ್ಯಕ್ಷ ಅರವಿಂದ ಏಗನಗೌಡರ ಅಧ್ಯಕ್ಷತೆ ವಹಿಸಿದ್ದರು. ವೀರಭದ್ರೇಶ್ವರ ರಥೋತ್ಸವ ಅಭಿನವಶಾಂತಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಉಪಸ್ಥಿತಿಯಲ್ಲಿ ಚಾಲನೆ ದೊರೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.