ಉಪ್ಪಿನ ಬೆಟಗೇರಿ: ಗುಣಮಟ್ಟದ ಅಕ್ಕಿ ವಿತರಣೆ
ಉಪ್ಪಿನ ಬೆಟಗೇರಿ (ಧಾರವಾಡ): ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನೀಡಿದ್ದ ಗಂಟ್ಟಿಕ್ಕಿದ ಮತ್ತು ಹುಳು ಅಕ್ಕಿಯನ್ನು ಇಲಾಖೆ ಪರಿಶೀಲಿಸಿದಲ್ಲದೇ, ಹುಳು ಮತ್ತು ಗಂಟ್ಟಿಕ್ಕಿದ ಅಕ್ಕಿಯ ಬದಲು ಗುಣಮಟ್ಟದ ಅಕ್ಕಿಯನ್ನು ನ್ಯಾಯ ಬೆಲೆ ಅಂಗಡಿಗಳಿಗೆ ನೀಡಿದೆ.
'ಕನ್ನಡಪ್ರಭ'ದಲ್ಲಿ ಪ್ರಕಟವಾದ ವಿಶೇಷ ವರದಿಯಿಂದ ಎಚ್ಚೆತ್ತ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅನ್ನಭಾಗ್ಯ ಯೋಜನೆಯಡಿ ಉತ್ತಮ ಗುಣಮಟ್ಟದ ಅಕ್ಕಿ ನೀಡಲು ವಿಶೇಷ ಕಾಳಜಿ ವಹಿಸಿಕೊಂಡಿದೆ. ಅಲ್ಲದೆ, ಇಲಾಖೆ ಅಧಿಕಾರಿಗಳು ತಾಲೂಕಿನ ವಿವಿಧ ನ್ಯಾಯ ಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಅಕ್ಕಿ ಗುಣಮಟ್ಟ ಪರೀಶಿಲಿಸುತ್ತಿದ್ದಾರೆ. ಅದರಂತೆ ತಾಲೂಕಿನ ಉಪ್ಪಿನ ಬೆಟಗೇರಿ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿದ್ದ ಆರು ನೂರಕ್ಕೂ ಅಧಿಕ ಪಡಿತರ ಚೀಟಿಗಳ 104 ಕ್ವಿಂಟಲ್ ಹುಳು ಮಿಶ್ರಿತ ಅಕ್ಕಿ ಬದಲು ಉತ್ತಮ ಗುಣಮಟ್ಟದ ಅಕ್ಕಿ ನೀಡಿ ಸಾರ್ವಜನಿಕರ ಕಾಳಜಿ ವಹಿಸುತ್ತಿದೆ. ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆ ಸಮಸ್ಯೆಗಳ ಕುರಿತಂತೆ ಸಾರ್ವಜನಿಕರು ದೂರು ಸಲ್ಲಿಸಲು ಆಯಾ ತಾಲೂಕಿನ ತಹಸೀಲ್ದಾರ್ ಕಚೇರಿ ದೂ. 0836 - 2442388ಗೆ ಸಂಪರ್ಕಿಸಬಹುದು ಅಥವಾ ಉಚಿತವಾಗಿ 1967ಗೆ ಕರೆ ಮಾಡಿ ದೂರು ದಾಖಲಿಸಬಹುದೆಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

