ಧಾರವಾಡ

ಕನ್ನಡ ಪೂರ್ವ ಪ್ರಾಥಮಿಕ ಶಾಲೆ ಕಟ್ಟಡ ಉದ್ಘಾಟನೆ

Published On :

ಹುಬ್ಬಳ್ಳಿ: ಜ್ಞಾನವೆಂಬ ಸಂಸ್ಕಾರದೊಡನೆ ಧರ್ಮವೆಂಬ ಜೀವ ತುಂಬಿದರೆ ಅದಕ್ಕೆ ಸರಿಸಾಟಿ ಮತ್ತೊಂದಿಲ್ಲ ಎಂದು ಮೂರುಸಾವಿರಮಠದ ಜಗದ್ಗುರು ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಹೇಳಿದರು.
ಇತ್ತೀಚೆಗೆ ಜರುಗಿದ ನಗರದ ಉಣಕಲ್ಲ ಶ್ರೀ ಸದ್ಗುರು ಸಿದ್ಧೇಶ್ವರ ಸ್ವಾಮಿ ಟ್ರಸ್ಟ್ ಕಮಿಟಿ ಹಾಗೂ ರೌಂಡ್ ಟೇಬಲ್ ವತಿಯಿಂದ ನಿರ್ಮಿಸಿರುವ ಸಿದ್ಧೇಶ್ವರ ಸ್ವಾಮಿ ವಿದ್ಯಾ ಸಂಸ್ಥೆಯ ಕನ್ನಡ ಪೂರ್ವ ಪ್ರಾಥಮಿಕ ಶಾಲಾ ಕಟ್ಟಡದ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಮಕ್ಕಳಿಗೆ ವಿದ್ಯಾರ್ಜನೆ ಜೊತೆಯಲ್ಲಿ ಧರ್ಮದ ಜ್ಞಾನ ನೀಡಿದರೆ ಅವರು ಉತ್ತಮ ಪ್ರಜೆಗಳಾಗಿ ಬಾಳಲು ಸಾಧ್ಯ. ಈ ನಿಟ್ಟಿನಲ್ಲಿ ಶಾಲಾ ಆಡಳಿತ ಮಂಡಳಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದರು.
ನೂತನ ಶಾಲಾ ಕಟ್ಟಡ ಉದ್ಘಾಟಿಸಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಕೇವಲ ಶಾಲೆಗಳನ್ನು ಸ್ಥಾಪಿಸಿದರೆ ಸಾಲದು. ಅಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ಶಿಕ್ಷಕರಿಗೆ ವಿದ್ಯಾರ್ಜನೆ ಮಾಡಲು ಉತ್ತಮ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರು.
ಮಹಾನಗರ ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಮಾತನಾಡಿದರು. ಪಾಲಿಕೆ ಮಾಜಿ ಸದಸ್ಯ ತಿಪ್ಪಣ್ಣ ಮಜ್ಜಗಿ, ನಿರಂಜನ ವಾಲಿಶೆಟ್ಟರ, ದ್ಯಾಮಣ್ಣ ಮೆಣಸಿನಕಾಯಿ, ಜ್ಯೋತಿಬಾ ಜಾಧವ, ಈಶ್ವರಲಿಂಗ ತಟ್ಟಿಮನಿ, ರಾಮಣ್ಣ ಪದ್ಮಣ್ಣವರ ಅತಿಥಿಗಳಾಗಿದ್ದರು. ಟ್ರಸ್ಟ್ ಕಮೀಟಿ ಅಧ್ಯಕ್ಷ ಮೂರುಸಾವಿರಪ್ಪ ಕೊರವಿ ಅಧ್ಯಕ್ಷತೆ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.