ಬೆಂಬಲ ಬೆಲೆಯಲ್ಲಿಮೆಕ್ಕೆಜೋಳ, ಬತ್ತ ಖರೀದಿ
ಧಾರವಾಡ: ರಾಜ್ಯ ಸರ್ಕಾರದ ಆದೇಶದನ್ವಯ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ರಾಜ್ಯ ಸಹಕಾರಿ ಮಾರಾಟ ಮಂಡಳಿ ನಿಗದಿತ ಗುಣಮಟ್ಟದ ಮೆಕ್ಕೆಜೋಳಕ್ಕೆ ಪ್ರತಿ ಕ್ವಿಂಟಲ್ ಗೆ ರು. 1310 ಹಾಗೂ ಧಾರವಾಡ ಮತ್ತು ಕಲಘಟಗಿ ತಾಲೂಕು ಕೇಂದ್ರಗಳಲ್ಲಿ ಮಾತ್ರ ಬತ್ತವನ್ನು ಪ್ರತಿ ಕ್ವಿಂಟಲ್ಗೆ ರು. 1600 ಬೆಂಬಲ ಬೆಲೆ ದರಗಳಲ್ಲಿ ಖರೀದಿಯನ್ನು ಪ್ರಾರಂಭಿಸಿದೆ. ಜಿಲ್ಲೆಯ ರೈತರು ಇದರ ಪ್ರಯೋಜನ ಪಡೆಯಲು ಜಿಲ್ಲಾಧಿಕಾರಿ ಸಮೀರ್ ಶುಕ್ಲಾ ತಿಳಿಸಿದ್ದಾರೆ. ನಿಬಂಧನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮಂಡಳಿಯ ಅಧಿಕಾರಿ ಮಲ್ಲಿಕಾರ್ಜುನ ದೂ. 94498 64444, ಆಹಾರ ಇಲಾಖೆಯ ದೂ. 0836 2444596 ಸಂಪರ್ಕಿಸಬಹುದು.
ಬಿಜೆಪಿಗೆ ಮನೆ ಕಾಯೋ ಕೆಲಸ: ಕುಮಾರಸ್ವಾಮಿ
ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಡಿ. 26
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಲಾಲೂಪ್ರಸಾದ ಯಾದವ್ ಅವರ ಮನೆ ಬಾಗಿಲು ಕಾಯುತ್ತಿದ್ದರೆ, ರಾಜ್ಯದಲ್ಲಿ ಬಿಜೆಪಿ ಮುಖಂಡರು ಯಡಿಯೂರಪ್ಪ ಅವರ ಮನೆ ಬಾಗಿಲು ಕಾಯುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.
ಗುರುವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಆತಂಕಕ್ಕೆ ಒಳಗಾಗಿವೆ. ಹೇಗಾದರೂ ಮಾಡಿ ಅಧಿಕಾರಕ್ಕೆ ಏರಬೇಕು ಎನ್ನುವ ತಂತ್ರ ರೂಪಿಸುತ್ತಿರುವ ಎರಡೂ ಪಕ್ಷಗಳು ಚುನಾವಣಾ ಪೂರ್ವ ಹೊಂದಾಣಿಕೆಗೆ ಯತ್ನಿಸುತ್ತಿವೆ ಎಂದು ಹೇಳಿದರು.
ಡಿ. 28ರಿಂದ ಜನವರಿ 2ರ ವರೆಗೆ ಬೆಂಗಳೂರಿನಲ್ಲಿ ಜೆಡಿಎಸ್ ಪದಾಧಿಕಾರಿಗಳ ಸಭೆ ನಡೆಯಲಿದ್ದು, ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಸಂಕ್ರಾಂತಿ ನಂತರ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

