ಧಾರವಾಡ

ಕಸಗುಡಿಸಿ ನೂತನ ಮರಳು ನೀತಿಗೆ ಆಕ್ರೋಶ

Published On :

ಹುಬ್ಬಳ್ಳಿ: ತುಂಗಭದ್ರಾ ಮರಳು ಸಾಗಾಣಿಕೆದಾರರ ಮುಷ್ಕರ 8ನೇ ದಿನಕ್ಕೆ ಕಾಲಿರಿಸಿದೆ. ಶನಿವಾರ ಗಬ್ಬೂರ ಬೈಪಾಸ್‌ನಿಂದ ಚನ್ನಮ್ಮ ವೃತ್ತದ ವರಗೂ ಲಾರಿಯಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿ ಸರ್ಕಾರದ ನೂತನ ಮರಳು ನೀತಿ ಖಂಡಿಸಿದರು.
ಲಾರಿ, ಬೈಕ್‌ಗಳಲ್ಲಿ ಪೊರಕೆ ಹಿಡಿದು ನೂರಾರು ಕಾರ್ಮಿಕರು ಚನ್ನಮ್ಮ ವೃತ್ತಕ್ಕೆ ಆಗಮಿಸಿದರು. ಚನ್ನಮ್ಮ ವೃತ್ತದಲ್ಲಿ ಕಸಗುಡಿಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಚನ್ನಮ್ಮ ವೃತ್ತದಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿದರಲ್ಲದೆ ರಾಜ್ಯ ಸರ್ಕಾರದ ಪ್ರತಿಕೃತಿ ದಹಿಸಿದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಂಘದ ಅಧ್ಯಕ್ಷ ಶಶಿಧರ ಕೊರವಿ, ಮುಷ್ಕರದಿಂದ ಸಾವಿರಾರು ಕುಟುಂಬಗಳು ಬೀದಿಪಾಲಾಗುವಂತಾಗಿದೆ. ಲಾರಿ ಚಾಲಕ, ಕ್ಲೀನರ್, ಗೌಂಡಿ, ಬಾರ್ ಬೆಂಡರ್ ಇನ್ನಿತರೆ ಕಾರ್ಮಿಕರಿಗೆ ಹೊಟ್ಟೆ ಹೊರೆಯುವುದು ಕಷ್ಟವಾಗಿದೆ. ಈ ಮೊದಲು ಒಂದು ಲೋಡ್ ಲಾರಿಗೆ ರು. 10 ಸಾವಿರವಿದ್ದ ಮರಳಿನ ಬೆಲೆ ಸದ್ಯ ರು. 25 ಸಾವಿರ ತಲುಪಿದೆ. ಇದರಿಂದ ಬಡವರು ಮನೆ ಕಟ್ಟಿಕೊಳ್ಳದಂತಾಗಿದೆ. ಹೀಗಾಗಿ, ಶೀಘ್ರ ನೂತನ ಮರಳು ನೀತಿಯನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.
ಶೀಘ್ರ ಮರಳು ನೀತಿಯನ್ನು ಹಿಂಪಡೆಯದಿದ್ದಲ್ಲಿ ಮುಂದೆ ಉಗ್ರ ಹೋರಾಟ ಕೈಗೊಳ್ಳುವುದಾಗಿ ಎಚ್ಚರಿಸಿದರು. ಅಲ್ಲದೆ, ತಹಸೀಲ್ದಾರ್ ಕಚೇರಿಗೆ ತೆರಳಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಸಂಘದ ಉಪಾಧ್ಯಕ್ಷ ಪ್ರಭಾಕರ ಉಪಾಧ್ಯಾಯ, ಅರುಣ ಜರತಾಘರ್ ಅಶೋಕ ಆರ್. ಸೋಲಾರಕೊಪ್ಪ, ಜಹೀರ್ ಮೇಸ್ತ್ರಿ, ಅನ್ವರ ಮ್ಯಾಗೇರಿ ಹಸನಸಾಬ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.