ಸರ್ಕಾರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ
ಕಲಘಟಗಿ: ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಿಂದುಳಿದಿರುವ ಬಂಜಾರಾ ಸಮಾಜದ ಅಭಿವೃದ್ಧಿಗೆ ಪ್ರಾಮಾಣಿಕ ಸೇವೆ ಮಾಡುತ್ತಿದ್ದು ಸಮಾಜದ ಜನರು ಸರ್ಕಾರದ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ಪ್ರಹ್ಲಾದ್ ಜೋಶಿ ಹೇಳಿದರು.
ಶನಿವಾರ ಪಟ್ಟಣದ ಹನ್ನೆರಡುಮಠದ ಆವರಣದಲ್ಲಿ ಜರುಗಿದ ತಾಲೂಕು ಬಂಜಾರ ಸಮಾಜದ ಜನಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಬಂಜಾರ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದಲ್ಲದೆ ಅವರ ಮೂಲಭೂತ ಸೌಲಕರ್ಯಗಳಿಗಾಗಿ ನಿಗದಿತ ವೇಳೆಗೆ ಅನುದಾನ ಬಿಡುಗಡೆ ಮಾಡಲಾಗಿತ್ತು. ಲಂಬಾಣಿ ಸಮಾಜದವರು ತಮ್ಮ ಸಂಸ್ಕೃತಿ, ಕಲೆ ಸಾಹಿತ್ಯ ಉಳಿಸಿಕೊಂಡು ಬಂದಿದ್ದು ಶ್ಲಾಘನೀಯ. ಇದಕ್ಕೆ ಸಂಬಂಧಿಸಿದ ತಮ್ಮ ಬೇಡಿಕೆಗಳನ್ನು ರಾಜ್ಯ ಕನ್ನಡ ಸಂಸ್ಕೃತಿ ಸಚಿವರಿಗೆ ಪತ್ರ ಬರೆದು ಈಡೇರಿಸುವುದಾಗಿ ಹೇಳಿದರು.
ಈಗಾಗಲೇ ಲೋಕಸಭಾ ಚುನಾವಣೆಯ ಪ್ರನಾಳಿಕೆಯಲ್ಲಿ ಪ್ರತಿ ಗ್ರಾಮದಲ್ಲೂ ಶುದ್ಧ ಕುಡಿಯುವ ನೀರು, ಶಿಕ್ಷಣ, ಗ್ರಾಮ ನೈರ್ಮಲ್ಯಕ್ಕೆ ಆದ್ಯತೆ ನೀಡಿರುವುದಾಗಿ ತಿಳಿಸಿದರು.
ಕ್ರೆಡೆಲ್ ಮಾಜಿ ಅಧ್ಯಕ್ಷ ಸಿ.ಎಂ. ನಿಂಬಣ್ಣವರ ಮಾತನಾಡಿ, ಬಂಜಾರ ಸಮಾಜದಲ್ಲಿ ಸಂಘಟನಾ ಶಕ್ತಿಯ ಕೊರತೆಯಿಂದಾಗಿ ಸಮಾಜದ ಜನರು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿಯುತ್ತಿದ್ದಾರೆ. ಸಂಘಟಿತರಾಗಿ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಹೇಳಿದರು.
ರಾಜ್ಯ ಬಂಜಾರ ಗುರುಪೀಠದ ಶ್ರೀ ತಿಪ್ಪೇಶ್ವರ ಸ್ವಾಮೀಜಿ, ಸ್ಥಳೀಯ ಹನ್ನೆರಡುಮಠದ ಶ್ರೀ ರೇವಣಸಿದ್ಧ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಜಿಪಂ ಸದಸ್ಯ ವೈ.ಬಿ. ದಾಸನಕೊಪ್ಪ, ಬಸವರಾಜ ಕರಡಿಕೊಪ್ಪ, ತಾಪಂ ಅಧ್ಯಕ್ಷ ಎಂ.ಎಫ್. ಜಾವೂರ, ಸದಸ್ಯ ಶೇಖಪ್ಪ ಹುಲಗೂರ, ಯಲ್ಲಾರಿ ಶಿಂದೇ, ಉ.ಕ. ಬಂಜಾರ ಸಮಾಜದ ಅಧ್ಯಕ್ಷ ಪಾಂಡುರಂಗ ಪಮ್ಮಾರ, ಸಿ.ಎಚ್. ಪಾಟೀಲ, ತಾಲೂಕು ಜೆಡಿಎಸ್ ಅಧ್ಯಕ್ಷ ಶಂಕರಗಿರಿ, ತಾಲೂಕಾ ಬಂಜಾರ ಸಮಾಜದ ಅಧ್ಯಕ್ಷ ಅರ್ಜುನ ಲಮಾಣಿ, ಕಾರ್ಯದರ್ಶಿ ಲಿಂಗಪ್ಪ ಲಮಾಣಿ, ಜಿಪಂ ಮಾಜಿ ಸದಸ್ಯೆ ಮಾಲಾ ಗೋಕುಲ, ಸೋಮು ಲಮಾಣಿ, ಚನ್ನಪ್ಪ ಲಮಾಣಿ, ಟೋಪಣ್ಣ ಲಮಾಣಿ, ಯಶವಂತ ಲಮಾಣಿ, ಕೃಷ್ಣ ಚೌಹಾಣ್, ಅರ್ಜುನ ಚೌಹಾಣ್, ನಾಗವೇಣಿ ಉಡುಪಿ, ಗಂಗಾ ಲಮಾಣಿ, ಆನಂದಸ್ವಾಮಿ ಮುಂತಾದವರು ಪಾಲ್ಗೊಂಡಿದ್ದರು.
ಇದಕ್ಕೂ ಮೊದಲು ಲಂಬಾಣಿ ಜನಾಂಗದ ಮಹಿಳೆಯವರು ತಮ್ಮ ವೇಷ ಭೂಷಣಗಳೊಂದಿಗೆ ಜನಪದ ಕಲೆ ಪ್ರದರ್ಶಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

