ಧಾರವಾಡ

ಶೇ. 25ಸೀಟ್ ಮೀಸಲಿಟ್ಟ ಸ್ಥಾನಕ್ಕೆ ಪ್ರವೇಶಾಹ್ವಾನ

Published On :

ಧಾರವಾಡ: ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತ ಶಾಲೆಗಳನ್ನು ಹೊರತುಪಡಿಸಿ ಅನುದಾನ ರಹಿತ ಪೂರ್ವ ಪ್ರಾಥಮಿಕ ಅಥವಾ 1ನೇ ತರಗತಿಗೆ ದಾಖಲಾತಿ ಮಾಡುವಾಗ ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯ್ದೆ ಅನ್ವಯ ಅನಾನುಕೂಲ ಪರಿಸ್ಥಿತಿಯಲ್ಲಿರುವ ಮತ್ತು ದುರ್ಬಲ ವರ್ಗದ ಮಕ್ಕಳಿಗೆ ಮೀಸಲಿಟ್ಟ ಶೇ. 25ರಷ್ಟು ಸೀಟ್‌ಗಳಿಗೆ ಪಾಲಕರಿಂದ ಅವರು ವಾಸಿಸುವ ಸ್ಥಳದ ನೆರೆಹೊರೆಯ ಶಾಲೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪಾಲಕರ ವಾರ್ಷಿಕ ಆದಾಯ ರು. 3.50 ಲಕ್ಷದ ಮಿತಿಯಲ್ಲಿರಬೇಕು. ನಿಗದಿಪಡಿಸಲಾದ ದಾಖಲಾತಿ ಅರ್ಜಿ ನಮೂನೆಗಳು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗಳಲ್ಲಿ ಹಾಗೂ ಸಂಬಂಧಪಟ್ಟ ಶಾಲೆಗಳಲ್ಲಿಯೂ ಉಚಿತವಾಗಿ ಸಿಗುತ್ತವೆ. ಶಾಲಾ ದಾಖಲಾತಿ ಕೋರಿ ಪೋಷಕರು ಜನವರಿ 7ರಿಂದ ಫೆಬ್ರವರಿ 8ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ಬಂದ ಅರ್ಜಿಗಳನ್ನು ಪರಿಶೀಲನೆ ನಡೆಸಿ ಶಾಲೆಯವರು ಆಯ್ಕೆ ಪಟ್ಟಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗೆ ಸಲ್ಲಿಸಲು ಫೆಬ್ರವರಿ 17 ಕೊನೆಯ ದಿನವಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಫೆಬ್ರವರಿ 28ರೊಳಗಾಗಿ ದಾಖಲಾತಿಯನ್ನು ಅನುಮೋದಿಸಿ ಸಂಬಂಧಿತ ಶಾಲೆಗಳಿಗೆ ಕಳಿಸಬೇಕು. ಶಾಲೆಗಳಲ್ಲಿ ಮಾ. 3ರಂದು ದಾಖಲಾತಿ ಪ್ರಕ್ರಿಯೆ ಪ್ರಾರಂಭಿಸಬೇಕು. ಅಲ್ಲದೆ, ಆರ್‌ಟಿಇ ಅಡಿಯಲ್ಲಿ ಬರುವ ಶಾಲೆಗಳ ಪಟ್ಟಿಯನ್ನು, ಲಭ್ಯವಿರುವ ಸೀಟ್‌ಗಳ ಕುರಿತು ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಶಾಲೆ ಅಥವಾ ಕ್ಷೇತ್ರ ಶಿಕ್ಷಣಾಧಿಕಾರಿಯನ್ನು ಭೇಟಿ ಮಾಡಬಹುದಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.