ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಫೆ.9 ಹಾಗೂ 10ರಂದು ಮುಂಬೈನ ಡೊಂಬಿವಲಿಯಲ್ಲಿ ಅಖಿಲ ಭಾರತ ಹೊರನಾಡ ಕನ್ನಡ ಸಂಘಗಳ 3ನೇ ಮಹಾಮೇಳ ಹಮ್ಮಿಕೊಂಡಿದೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಹಾಮೇಳದ ಕುರಿತು ಮಾಹಿತಿ ನೀಡಿದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ನಾಡೋಜ ಡಾ. ಪಾಟೀಲ ಪುಟ್ಟಪ್ಪ, ಎರಡೂ ದಿನ ಡೊಂಬಿವಲಿಯ ಸಾವಿತ್ರಿಬಾಯಿ ಫುಲೆ ಕಲಾಮಂದಿರದಲ್ಲಿ ಈ ಮೇಳ ನಡೆಯಲಿದ್ದು, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಫೆ.9ರ ಬೆಳಗ್ಗೆ 10ಕ್ಕೆ ಮೇಳ ಉದ್ಘಾಟಿಸಲಿದ್ದಾರೆ. ಸಿರಿಗೆರೆಯ ಡಾ. ಶಿವಮೂರ್ತಿ ಶಿವಾಚಾರ್ಯರು ಹಾಗೂ ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮಿಗಳು ಸಾನ್ನಿಧ್ಯ ವಹಿಸಲಿದ್ದಾರೆ ಎಂದರು.