ಧಾರವಾಡ: ಇಲ್ಲಿನ ರಂಗಾಯಣವು ನಗರದ ಸುವರ್ಣ ಸಾಂಸ್ಕೃತಿಕ ಸಮುಚ್ಚಯದಲ್ಲಿ ಶಾಲಾ ಶಿಕ್ಷಕರಿಗಾಗಿ ಫೆ. 7ರ ಬೆಳಗ್ಗೆ 11.30ಕ್ಕೆ ಶಿಕ್ಷಕರ ರಂಗ ತರಬೇತಿ ಶಿಬಿರ ಏರ್ಪಡಿಸಿದೆ. ಡಿಡಿಪಿಐ ಬಿ.ಕೆ.ಎಸ್.ವರ್ಧನ್ ಶಿಬಿರಕ್ಕೆ ಚಾಲನೆ ನೀಡುವರು. ರಂಗಾಯಣದ ನಿರ್ದೇಶಕ ಸುಭಾಸ ನರೇಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ಸಹನಿರ್ದೇಶಕ ಶಿವಶಂಕರ ಹಿರೇಮಠ ಭಾಗವಹಿಸುತ್ತಾರೆಂದು ರಂಗಾಯಣದ ಆಡಳಿತಾಧಿಕಾರಿ ಕೆ.ಎಚ್. ಚನ್ನೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---