ಧಾರವಾಡ

ವರದಿ ಅನುಷ್ಠಾನ

Published On :

ಧಾರವಾಡ:  ಡಾ. ನಂಜುಂಡಪ್ಪ ವರದಿಯನ್ವಯ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಅಭಿವೃದ್ಧಿಗಾಗಿ ವಿಶೇಷ ಅನುದಾನದ ಅಡಿ ಕಾಮಗಾರಿ ಜಾರಿಯಲ್ಲಿವೆ. ಈ ಕಾಮಗಾರಿಗಳ ಸ್ಥಳಗಳಲ್ಲಿ ಇದನ್ನು ಸ್ಪಷ್ಟವಾಗಿ ತಿಳಿಸುವ, ಕಾಮಗಾರಿ ವಿವರ ಇತ್ಯಾದಿಗಳ ಮಾಹಿತಿ ಫಲಕ ಕಡ್ಡಾಯವಾಗಿ ಪ್ರದರ್ಶಿಸಲು ಡಾ. ಡಿ.ಎಂ. ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿ ಅಧ್ಯಕ್ಷ ತ್ರಿವಿಕ್ರಮ ಜೋಶಿ ನಿರ್ದೇಶಿಸಿದರು. ಡಿಸಿ ಕಚೇರಿಯಲ್ಲಿ ಗುರುವಾರ ಜರುಗಿದ 2012-13ನೇ ಸಾಲಿನ ವಿಶೇಷ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದ ಪ್ರಗತಿ ಪರಿಶೀಲಿಸುವ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಕಲಘಟಗಿ ತಾಲೂಕು ಹಾಗೂ ನವಲಗುಂದ ಮತ್ತು ಕುಂದಗೋಳ ತಾಲೂಕುಗಳು ಹಿಂದುಳಿದ ತಾಲೂಕುಗಳೆಂದು ವರದಿಯನ್ವಯ ವರ್ಗೀಕರಿಸಲಾಗಿದೆ. ಈ ಮೂರು ತಾಲೂಕುಗಳಲ್ಲಿ ಕೃಷಿ, ಪಶು ಸಂಗೋಪನೆ, ವ್ಯಾಪಾರ, ಶಿಕ್ಷಣ, ಆರೋಗ್ಯ, ತೋಟಗಾರಿಕೆ, ವಸತಿ, ನೀರಾವರಿ, ವಿದ್ಯುಚ್ಛಕ್ತಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ, ಜಲಾನಯನ ಹಾಗೂ ಮಹಿಳಾ ಮತ್ತು ಮಕ್ಕಳ ಇಲಾಖೆಗಳಿಗಾಗಿ 17.37 ಕೋಟಿ ಸೇರಿದಂತೆ ಪ್ರಸಕ್ತ ಸಾಲಿನಲ್ಲಿ ಒಟ್ಟು 71.75 ಕೋಟಿ ಬಿಡುಗಡೆಯಾಗಿದೆ. ಜಿಲ್ಲೆಯಲ್ಲಿ ಡಾ.ಡಿ.ಎಂ. ನಂಜುಂಡಪ್ಪ ವರದಿ ಅನುಷ್ಠಾನ ಕುರಿತ ಕಾಮಗಾರಿಗಳು ತೃಪ್ತಿಕರವಾಗಿ ಜರುಗುತ್ತಿವೆ  ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.