ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ
ಹುಬ್ಬಳ್ಳಿ: ಜನಪ್ರಿಯ ಚೊಚ್ಚಲ ಬಜೆಟ್ ಮಂಡಿಸಿದ ಹುರುಪಿನಲ್ಲಿದ್ದ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಶನಿವಾರ ಸಂಜೆ 2 ಗಂಟೆಗೂ ಹೆಚ್ಚು ಕಾಲ ತವರೂರಲ್ಲಿ ಸಂಚರಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ವಾರ್ಡ್ ನಂ. 56ರಲ್ಲಿ ಬರುವ ಘಂಟಿಕೇರಿಯಲ್ಲಿ ಒಟ್ಟು ರು. 1.46 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಒಳಚರಂಡಿ, ಉಪರಸ್ತೆ, ತೋರವಿಗಲ್ಲಿ-ಮಂಗಳವಾರಪೇಟ ನಾಲಾಗೋಡೆ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಪಾಲಿಕೆಗೆ ರಾಜ್ಯ ಸರ್ಕಾರ 2ನೇ ಹಂತದಲ್ಲಿ ಬಿಡುಗಡೆ ಮಾಡಿರುವ ರು. 1.5 ಕೋಟಿ ವೆಚ್ಚದಲ್ಲಿ ಈ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಇದೇ ರೀತಿಯಾಗಿ ರು. 7.5 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಘಂಟಿಕೇರಿ ಓಣಿ ಮಹಾದ್ವಾರ ಹಾಗೂ ತಲಾ ರು. 7.5 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ರುದ್ರಾಕ್ಷಿಮಠ ಹಾಗೂ ಜೋಳದ ಓಣಿ ಮಹಾದ್ವಾರ ಕಾಮಗಾರಿಗೆ ಶಂಕುಸ್ಥಾಪನೆಯನ್ನು ಸಿಎಂ ನೆರವೇರಿಸಿದರು.
ಅಭಿವೃದ್ಧಿಗೆ ಚಾಲನೆ: ರು. 15 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸೆಟ್ಲಮೆಂಟ್ ರಸ್ತೆ, ಚರಂಡಿ ಯೋಜನೆ, ರು. 3 ಲಕ್ಷ ವೆಚ್ಚದಲ್ಲಿ ಮಂಗಳವಾರಪೇಟ ಒಳರಸ್ತೆ, ಚರಂಡಿ ಹಾಗೂ ವೀರಾಪುರ ಓಣಿಯಲ್ಲಿ ರು. 3 ಲಕ್ಷ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿರುವ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿದರು. ನಂತರ ರುದ್ರಾಕ್ಷಿಮಠ ಹಾಗೂ ಎರಡೆತ್ತಿನ ಮಠಕ್ಕೆ ಭೇಟಿ ನೀಡಿದ್ದ ಸಿಎಂ ಶೆಟ್ಟರ್ ಅವರನ್ನು ಶ್ರೀ ಬಸವಲಿಂಗ ಸ್ವಾಮೀಜಿ ಹಾಗೂ ಶ್ರೀ ಸಿದ್ಧಲಿಂಗ ಸ್ವಾಮೀಜಿ ಕ್ರಮವಾಗಿ ಸನ್ಮಾನಿಸಿ ಆರ್ಶೀವದಿಸಿದರು. ಅಲ್ಲಿಂದ ನೇರವಾಗಿ ಬಿಡ್ನಾಳಕ್ಕೆ ತೆರಳಿದ ಸಿಎಂ, ಸಿಮೆಂಟ್ ಹಾಗೂ ಡಾಂಬರ್ನಿಂದ ನಿರ್ಮಿಸಲಾದ ರಸ್ತೆ ಕಾಮಗಾರಿ ಪರಿಶೀಲಿಸಿದರು.
ಹಳೇ ಹುಬ್ಬಳ್ಳಿ ಸದರಸೋಫಾಕ್ಕೆ ತೆರಳಿದ ಶೆಟ್ಟರ್, ಕೊಳಚೆ ಪ್ರದೇಶದ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಿದರು. ನೇಕಾರನಗರದಲ್ಲಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಅವರು, ಗೋಕುಲ ರಸ್ತೆಯ ಕೋಟಿಲಿಂಗೇಶ್ವರ ನಗರಕ್ಕೆ ತೆರಳಿ ರಸ್ತೆ ಕಾಮಗಾರಿ ವೀಕ್ಷಿಸಿದರು. ನಂತರ, ನ್ಯೂ ಕಾಟನ್ ಮಾರ್ಕೆಟ್ನಲ್ಲಿ ರು. 5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕನ್ವೆನ್ಶನಲ್ ಹಾಲ್ಗೆ ಭೇಟಿ ನೀಡಿದ ಸಿಎಂ ಶೆಟ್ಟರ್, ಕಾಮಗಾರಿಯ ಪರಿಶೀಲನೆ ನಡೆಸಿದರು.
ಸಂಸದ ಪ್ರಹ್ಲಾದ ಜೋಶಿ, ಶಾಸಕ ವೀರಭದ್ರಪ್ಪ ಹಾಲಹರವಿ, ಮೇಯರ್ ಡಾ. ಪಾಂಡುರಂಗ ಪಾಟೀಲ, ಬಿಜೆಪಿ ಜಿಲ್ಲಾಧ್ಯಕ್ಷ ಮಹೇಶ ಟೆಂಗಿನಕಾಯಿ, ಜಿಲ್ಲಾಧಿಕಾರಿ ಸಮೀರ್ ಶುಕ್ಲಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

