ಇಂದು ವಿವಿಧ ಕಾಮಗಾರಿಗಳಿಗೆ ಸಿಎಂ ಚಾಲನೆ
ಧಾರವಾಡ: ಅವಳಿ ನಗರದ 31 ವಾರ್ಡ್ಗಳಿಗೆ 24 ಗಂಟೆಗಳ ಕಾಲ ನಿರಂತರ ನೀರು ಸರಬರಾಜು ಯೋಜನೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಫೆ.10 ರಂದು ಸಂಜೆ 5ಕ್ಕೆ ಮುಖ್ಯಮಂತ್ರಿ ಶೆಟ್ಟರ್ ಚಾಲನೆ ನೀಡಲಿದ್ದಾರೆ ಎಂದು ಮೇಯರ್ ಪಾಡುರಂಗ ಪಾಟೀಲ ಹೇಳಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜೆಟ್ನಲ್ಲಿ ಸಿಎಂ ಶೆಟ್ಟರ್ ಅವರು ಮಹಾನಗರ ಪಾಲಿಕೆಗೆ ರು. 25.5 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಕೆಲ ಕಾಮಗಾರಿಗಳಿಗೆ ಕಾರ್ಯಾದೇಶ ನೀಡಿದೆ. ಕಾಮಗಾರಿಗಳಿಗೆ ಫೆ.10ರಂದು ಸಿಎಂ ಚಾಲನೆ ನೀಡಲಿದ್ದಾರೆ ಎಂದರು. ಬಜೆಟ್ನಲ್ಲಿ ಜಿಲ್ಲೆಗೆ ಹಿನ್ನಡೆಯಾಗಿಲ್ಲ. ಅವಳಿನಗರದ ಹು-ಧಾ ಮಹಾನಗರ ಪಾಲಿಕೆಗೆ ಅನುದಾನ ನೀಡಿದ್ದಾರೆ. ಇಷ್ಟೊಂದು ಅಭಿವೃದ್ಧಿ ಕಾರ್ಯ ಅನುಷ್ಠಾನಗೊಳ್ಳುತ್ತಿರುವುದು ಪಾಲಿಕೆಯ ಇತಿಹಾಸದಲ್ಲಿಯೇ ಪ್ರಥಮ ಎಂದರು. ನಗರದಲ್ಲಿನ ಕಲಾಭವನ ಮತ್ತು ಹುಬ್ಬಳ್ಳಿಯ ಚಿಟಗುಬ್ಬಿ ದವಾಖಾನೆ ನವೀಕರಣ, ರೈತ ಭವನವು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲಿದ್ದಾರೆ. ನಗರದ ಜನತೆಯ ಬಹುದಿನಗಳ ಕನಸು ಸೂಪರ್ ಮಾರ್ಕೆಟ್ಗೆ ಈ ಬಾರಿಯ ಬಜೆಟ್ನಲ್ಲಿ ಅನುದಾನ ಬಿಡುಗಡೆಯಾಗಿದೆ. ಆರು ಅಂತಸ್ತಿನ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಿದ್ದಾರೆ. ಹು-ಧಾ ಮಹಾನಗರ ಪಾಲಿಕೆಯ ಸುವರ್ಣ ಮಹೋತ್ಸವದ ಈ ಸಂದರ್ಭ ಸ್ವಾಮಿ ವಿವೇಕಾನಂದರ ಪ್ರತಿಮೆ ಮತ್ತು ದ.ರಾ. ಬೇಂದ್ರೆ ಅವರ ಕಂಚಿನ ಮೂರ್ತಿಯನ್ನು ಸಿಎಂ ಅನಾವರಣಗೊಳಿಸಲಿದ್ದಾರೆ ಎಂದರು. ಪಾಲಿಕೆ ಎದುರು ಗುತ್ತಿಗೆ ಪೌರಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆ ಕುರಿತಾಗಿ ಸುದ್ದಿಗಾರರು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ವಾಸ್ತವವಾಗಿ ಗುತ್ತಿಗೆ ಪೌರಕಾರ್ಮಿಕರು ಪಾಲಿಕೆಗೆ ಯಾವುದೇ ವ್ಯವಹಾರ ನಡೆಯುವುದಿಲ್ಲ. ಅವರು ನೇರವಾಗಿ ಗುತ್ತಿಗೆದಾರರಿಗೆ ಸಂಬಂಧಿಸುತ್ತಾರೆ. ಗುತ್ತಿಗೆ ಪೌರಕಾರ್ಮಿಕರು ಪಾಲಿಕೆ ಕಾರ್ಮಿಕರಲ್ಲ, ಇಲ್ಲಿ ಪಾಲಿಕೆ ಮತ್ತು ಗುತ್ತಿಗೆದಾರರ ನಡೆಯುವ ವ್ಯವಹಾರವಿರುತ್ತದೆ. ಗುತ್ತಿಗೆ ಪೌರಕಾರ್ಮಿಕರಿಗೂ ಪಾಲಿಕೆಗೆ ಯಾವುದೇ ರೀತಿ ಸಂಬಂಧವಿಲ್ಲ. ಪಾಲಿಕೆಗೆ ಖಾಯಂ ಪೌರ ಕಾರ್ಮಿಕರನ್ನು ನೇಮಿಸಿಕೊಳ್ಳುವ ಯಾವುದೇ ಹಕ್ಕು ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಪ್ರಕಾಶ ಗೋಡಬೋಲೆ, ಮಹೇಶ ಟೆಂಗಿನಕಾಯಿ, ಈರೇಶ ಅಂಚಟಗೇರಿ, ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

