ಧಾರವಾಡ

ಧಾರವಾಡ: ನಾಳೆ ಅಲ್ಪಸಂಖ್ಯಾತರ ಸಮಾವೇಶ

Published On :

ಧಾರವಾಡ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನಿರ್ದೇಶನದ ಮೇರೆಗೆ ಜೆಡಿಎಸ್ ಅಲ್ಪಸಂಖ್ಯಾತರ ಘಟಕದಿಂದ ಫೆ. 13ರಂದು ಸಂಜೆ 5ಕ್ಕೆ ಇಲ್ಲಿನ ಕಡಪಾ ಮೈದಾನದಲ್ಲಿ ಅಲ್ಪಸಂಖ್ಯಾತರ ಸಮಾವೇಶ ಹಮ್ಮಿಕೊಳ್ಳಲಾಗಿದೆ.
  ಸೋಮವಾರ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಅಲ್ಪ ಸಂಖ್ಯಾತರ ಘಟಕದ ಮುಖಂಡ ಇಸ್ಮಾಯಿಲ್ ತಮಟಗಾರ ಮಾತನಾಡಿ, ವಿಧಾನಸಭಾ ಕ್ಷೇತ್ರ 71 ಮತ್ತು 74ರಲ್ಲಿನ ಸುಮಾರು 15 ಸಾವಿರ ಅಲ್ಪಸಂಖ್ಯಾತರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಮಾವೇಶದಲ್ಲಿ ಜೆಡಿಎಸ್ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಅಲ್ಪ ಸಂಖ್ಯಾತರಿಗಾಗಿ ಜಾರಿಗೆ ತಂದ ಯೋಜನೆಗಳ ಕುರಿತು ಚರ್ಚಿಸಲಾಗುವುದಲ್ಲದೇ ಜನರಲ್ಲಿ ಜಾಗೃತಿ ಮೂಡಿಸಲಾಗುವುದೆಂದರು. ಫೆ. 18ರಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಜನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಧಾರವಾಡದ ಸುತ್ತಮುತ್ತಲಿನ ಗ್ರಾಮಗಳಾದ ತೇಗೂರ, ಗರಗ, ನರೇಂದ್ರ, ತಡಕೋಡ, ಉಪ್ಪಿನ ಬೇಟಗೇರಿ, ಅಮ್ಮಿನಭಾವಿ, ಹೆಬ್ಬಳ್ಳಿಗಳಲ್ಲಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಅಮೃತ ದೇಸಾಯಿ, ಗಂಗಾಧರ ಪಾಟೀಲ ಕುಲಕರ್ಣೆ, ಶಿವಾಜಿ ಜಾಧವ ಹಾಗೂ ತವನಪ್ಪ ದೇಸಾಯಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.