ಗ್ರಾಪಂ ನೌಕರರಿಗೆ ಕನಿಷ್ಠ ವೇತನಕ್ಕೆ ಮನವಿ
ಹುಬ್ಬಳ್ಳಿ: ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಪಂ ನೌಕರರ ಸಂಘ ಧಾರವಾಡ ಜಿಲ್ಲಾ ಘಟಕದ ಸದಸ್ಯರು ಶುಕ್ರವಾರ ಸಿಎಂ ಶೆಟ್ಟರ್ ಅವರಿಗೆ ಮನವಿ ಸಲ್ಲಿಸಿದರು. ಈ ಹಿಂದೆ ಪಂಚಾಯತ್ ರಾಜ್ ಸಚಿವರಾಗಿದ್ದಾಗ ಗ್ರಾಪಂ ನೌಕರರ ವೇತನಕ್ಕೆ ಪ್ರತ್ಯೇಕ ಅನುದಾನ ನಿಗದಿಗೆ ಶಿಫಾರಸ್ಸು ಮಾಡಿದ್ದರು. ಆದರೆ, ಈವರೆಗೂ ಪ್ರತ್ಯೇಕ ಅನುದಾನ ನಿಗದಿ ವ್ಯವಸ್ಥೆ ಇನ್ನೂ ಕಾರ್ಯಗತಗೊಂಡಿಲ್ಲ. ಮುಖ್ಯಮಂತ್ರಿ ಮತ್ತು ಹಣಕಾಸು ಸಚಿವರಾಗಿರುವ ಶೆಟ್ಟರ್ ಅವರು ಈ ನಿಟ್ಟಿನಲ್ಲಿ ಗಮನ ಹರಿಸಿ ಸಮಸ್ಯೆ ಪರಿಹರಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ. 2004 ಮತ್ತು 2008ರಲ್ಲಿ ರಚಿಸಲಾಗಿರುವ ಮತ್ತು ಇನ್ನೂ ಅಪೂರ್ಣವಾಗಿರುವ ಗ್ರಾಪಂ ಸೇವಾ ಸಿಬ್ಬಂದಿ ಸೇವಾ ಸಿಬ್ಬಂದಿ ನಿಯಮವನ್ನು ತಕ್ಷಣ ನಗರ ಪಾಲಿಕೆ ಸಂಸ್ಥೆಗಳಿಗೆ ಇರುವಂತೆ ರಚಿಸಬೇಕು ಎಂದು ಮನವಿಯಲ್ಲಿ ಕೋರಲಾಗಿದೆ. ಕಂಪ್ಯೂಟರ್ ಆಪರೇಟರ್ ಹುದ್ದೆಗಳನ್ನು ಹೊರ ಗುತ್ತಿಗೆ ನೀಡಬಾರದು. ಎಲ್ಲ ಗ್ರಾಪಂ ಸಿಬ್ಬಂದಿಗೆ ನಿವೃತ್ತಿ ವೇತನ ಸೇರಿದಂತೆ ವಿವಿಧ ಸೌಲಭ್ಯ ನೀಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

