ಯೋಗದಿಂದ ಆರೋಗ್ಯ: ವಿನಾಯಕ
ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಫೆ. 24
ವಿದ್ಯಾರ್ಥಿ ಜೀವನದಲ್ಲಿಯೇ ಯೋಗ ಕಲಿತರೆ ಜೀವನ ಪರ್ಯಂತ ಆರೋಗ್ಯವಾಗಿರಬಹುದು ಎಂದು ಯೋಗ ಶಿಕ್ಷಕ ವಿನಾಯಕ ತಲಗೇರಿ ಹೇಳಿದರು.
ಕೆಎಲ್‌ಇ ಸಂಸ್ಥೆಯ ನಗರದ ಸಿ.ಐ. ಮುನವಳ್ಳಿ ಪಾಲಿಟೆಕ್ನಿಕ್‌ನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಇತ್ತೀಚೆಗೆ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಧ್ಯಾನ ಮಾಡುವುದರಿಂದ ಮನಸ್ಸಿನಲ್ಲಿನ ಭಯ ಹಾಗೂ ಆತಂಕ ದೂರವಾಗುತ್ತದೆ. ಆತ್ಮಸ್ಥೈರ್ಯ ಮೂಡಿ ಧೈರ್ಯದಿಂದ ಜೀವನದಲ್ಲಿನ ಸವಾಲು ಎದುರಿಸಲು ಸಹಾಯವಾಗುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಶಂಕರಣ್ಣ ಮುನವಳ್ಳಿ ಮಾತನಾಡಿ, ಪ್ರತಿಯೊಬ್ಬರ ಜೀವನದಲ್ಲಿ ಕೀಳರಿಮೆ ದೊಡ್ಡ ಶತ್ರು. ಅದನ್ನು ಚಿಕ್ಕ ವಯಸ್ಸಿನಲ್ಲಿಯೇ ಗುರುತಿಸಿ ನಿವಾರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ಶೈಲಜಾ ಶಾಸ್ತ್ರಿ, ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆ ಮೂಲಕ ವಿದ್ಯಾರ್ಥಿಗಳಿಗೆ ಹಲವಾರು ವಿಷಯಗಳನ್ನು ಮನವರಿಕೆ ಮಾಡಿದರು. ಓದು ಅಥವಾ ಇನ್ನಿತರ ಯಾವುದೇ ವಿಷಯದ ಬಗ್ಗೆ ಆಸಕ್ತಿ ಮುಖ್ಯ. ಆಸಕ್ತಿ ಇರದಿದ್ದರೆ ಯಾವುದೇ ಕೆಲಸ ಪರಿಪೂರ್ಣ ಆಗುವುದಿಲ್ಲ. ಆಸಕ್ತಿ ಇದ್ದರೆ ಉತ್ಸಾಹ, ಏಕಾಗ್ರತೆ, ಆತ್ಮವಿಶ್ವಾಸ ವೃದ್ಧಿಸುತ್ತದೆ ಎಂದು ತಿಳಿಸಿದರು.
ಎಸ್‌ಎಸ್‌ಎಲ್‌ಸಿ ನಂತರ ವಿದ್ಯಾರ್ಥಿಗಳು ಯಾವ ಕೋರ್ಸುಗಳನ್ನು ಆಯ್ಕೆ ಮಾಡಿಕೊಳ್ಳಬಹುದು ಎಂಬುದನ್ನು ಪ್ರಾಧ್ಯಾಪಕಿ ಗೌರಿ ಗಾಡದ ವಿವರಿಸಿದರು. ಪ್ರಾಚಾರ್ಯ ಡಿ.ಆರ್. ಕುಲಕರ್ಣಿ, ಬಿ.ಎ. ಪೂಜಾರಿ, ಎಸ್.ಸಿ. ಅಳಗುಂಡಗಿ, ಎಂ.ಎಲ್. ಮಳಗಿ ಮತ್ತಿತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

