ದುಶ್ಚಟದಿಂದ ದೂರವಿದ್ದು ಸುಖ ಸಂಸಾರ ನಡೆಸಿ
ನವಲಗುಂದ: ಆತ್ಮ ವಿಶ್ವಾಸದಿಂದ ಪಂಚೇಂದ್ರಿಯಗಳನ್ನು ಹತೋಟಿಯಲ್ಲಿಟ್ಟುಕೊಂಡು ದುಶ್ಚಟಗಳಿಂದ ದೂರವಿದ್ದರೆ ಆರ್ಥಿಕವಾಗಿ ಜೀವನ ವೃದ್ಧಿಸುವುದರಲ್ಲಿ ಸಂಶಯವಿಲ್ಲ. 73 ಜನ ಮದ್ಯವರ್ಜನ ಶಿಬಿರದಿಂದ ಹೊಸ ಜೀವನಕ್ಕೆ ಕಾಲಿಡುತ್ತಿರುವುದು ಮಾದರಿಯಾಗಲಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅಭಿಪ್ರಾಯಪಟ್ಟರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನವಲಗುಂದ, ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು, ಶ್ರೀ ಹುರಕಡ್ಲಿ ಅಜ್ಜ ಕಲ್ಯಾಣ ಕೇಂದ್ರ, ಪುರಸಭೆ ನವಲಗುಂದ ಹಾಗೂ ನಗರದ ವಿವಿಧ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ 562ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದರು. 2 ಕೋಟಿ ಜನಸಂಖ್ಯೆಯಲ್ಲಿ ಕೇವಲ 73 ಜನ ಮದ್ಯಪಾನದಿಂದ ಮುಕ್ತರಾಗಿರುವುದು ಮಹತ್ವದ ವಿಷಯವಾಗಿದೆ ಎಂದರು.
ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರಾದ ಸಚ್ಚಿದಾನಂದ ಹೆಗಡೆ ಮಾತನಾಡಿ, ಹಲವಾರು ಯೋಜನೆಗಳನ್ನು ಹಮ್ಮಿಕೊಂಡ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗಡೆ 562ನೇ ಮದ್ಯಪಾನ ಶಿಬಿರದಿಂದ ಲಕ್ಷಾಂತರ ಜನರನ್ನು ಕುಡಿತದಿಂದ ಮುಕ್ತರಾಗಿಸಿದ್ದಾರೆ ಎಂದರು. ರಾಜ್ಯದಲ್ಲಿ 12000 ಮಠಗಳಿದ್ದು, ಅದರಲ್ಲಿ ಧರ್ಮಸ್ಥಳ ಒಂದೇ ಇಷ್ಟು ಕೆಲಸ ಮಾಡಿದೆ. ಉಳಿದ ಮಠಗಳು ಈ ರೀತಿ ಕೆಲಸ ಮಾಡಿದರೆ ಮದ್ಯಮುಕ್ತ ರಾಜ್ಯ ಮಾಡಬಹುದೆಂದು ಆಶಯ ವ್ಯಕ್ತಪಡಿಸಿದರು.
ಇದೇವೇಳೆ ಹಲವರನ್ನು ಸನ್ಮಾನಿಸಲಾಯಿತು. ಗವಿಮಠದ ಬಸವಲಿಂಗ ಮಹಾಸ್ವಾಮೀಜಿ ಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿದರು. ಸೀತಾರಾಮ ಶೆಟ್ಟಿ, ದಿಂಡಿಲಕೊಪ್ಪ, ಎಂ.ಬಿ. ಮುನೇನಕೊಪ್ಪ ಉಪಸ್ಥಿತರಿದ್ದರು. ಜಯಂತಿ ಹಾಗೂ ಚಂದ್ರಶೇಖರ ನಿರೂಪಿಸಿದರು. ಈರಣ್ಣ ಚವಡಿ ಸ್ವಾಗತಿಸಿದರು. ಯೋಜನಾಧಿಕಾರಿ ದಿನೇಶ ಪೂಜಾರ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

