ಕಳಸಾ ಬಂಡೂರಿಗಾಗಿ ಶೀಘ್ರ ಪತ್ರ ಚಳವಳಿ
ಧಾರವಾಡ: ಕಳಸಾ ಬಂಡೂರಿ ಯೋಜನೆಯ ಅನುಷ್ಠಾನ ಕುರಿತಂತೆ ಪತ್ರ ಚಳವಳಿ ಹೋರಾಟ ನಡೆಸುವುದಾಗಿ ರೈತ ಸೇನಾ ಕರ್ನಾಟಕ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಹೇಳಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯೋಜನೆಯ ಕುರಿತು ಈ ಹಿಂದೆ ಹೋರಾಟ ನಡೆಸಿದ ಹಲವರು ರಾಜಕೀಯ ಲಾಭ ಪಡೆದುಕೊಂಡು ಸುಮ್ಮನಿದ್ದಾರೆ. ಈ ಹಿನ್ನೆಲೆಯಲ್ಲಿ ಮತ್ತೆ ಹೋರಾಟ ಪ್ರಾರಂಭಿಸಲು ಸಜ್ಜಾಗುತ್ತಿರುವುದಾಗಿ ಅವರು ಹೇಳಿದರು. ಅಂತರ್ ರಾಜ್ಯ ನೀರು ಹಂಚಿಕೆ ವಿವಾದ ಕಚೇರಿಯಿಂದ ಸಂಪೂರ್ಣ ಮಾಹಿತಿ ಪಡೆದುಕೊಳ್ಳಲಾಗುತ್ತಿದ್ದು, ಮುಂದೆ ನ್ಯಾಯಾಧಿಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಲು ಚಿಂತನೆ ನಡೆಸಲಾಗುತ್ತಿದೆ ಎಂದರು. ಕರ್ನಾಟಕ ಹಾಗೂ ಗೋವಾ ರಾಜ್ಯಗಳಲ್ಲಿ ಒಂದೇ ರಾಷ್ಟ್ರೀಯ ಪಕ್ಷದ ಸರ್ಕಾರಗಳಿದ್ದು, ಇವು ಒಂದೇ ರಾಷ್ಟ್ರೀಯ ನೀತಿಯನ್ನು ಹೊಂದಿವೆ. ನ್ಯಾಯಾಧಿಕರಣದ ವಿಚಾರದಲ್ಲಿ ಇಬ್ಬಗೆಯ ನೀತಿಯನ್ನು ಅನುಸರಿಸುತ್ತಿರುವುದು ಯೋಜನೆಯ ವಿಳಂಬಕ್ಕೆ ಕಾರಣ. ಯೋಜನೆ ಬಗ್ಗೆ ಉತ್ತರ ಕರ್ನಾಟಕದ 9 ಜಿಲ್ಲೆಯಲ್ಲಿ ರೈತರ ಸಭೆ ನಡೆಸಿ ಚರ್ಚಿಸಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಶಂಕರ ಅಂಬಲಿ, ಸುಭಾಸ ಬಾಳೆಕಾಯಿ ಇದ್ದರು.
ಇಂದು ಗಾಂಧೀಜಿ ಮೂರ್ತಿ ಪ್ರತಿಷ್ಠಾಪನೆ
ಧಾರವಾಡ: ತಾಲೂಕಿನ ತಡಕೋಡ ಶೀಗಿಬಸವೇಶ್ವರ ದೇವಸ್ಥಾನ ಟ್ರಸ್ಟ್ ಕಮಿಟಿ ವತಿಯಿಂದ ಜ. 30ರಂದು ಗ್ರಾಪಂ ಆವರಣದಲ್ಲಿ ರಾಷ್ಟ್ರಪಿತ ಗಾಂಧೀಜಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುತ್ತದೆ. ಸುಳ್ಳದ ಸಿದ್ದಾರೂಢ ಮಠದ ರಮಾನಂದ ಸ್ವಾಮಿಜಿ ಸಾನ್ನಿಧ್ಯ ವಹಿಸಲಿದ್ದು, ಮಾಜಿ ಶಾಸಕ ಎ.ಬಿ. ದೇಸಾಯಿ ಅಧ್ಯಕ್ಷತೆ ವಹಿಸುತ್ತಾರೆ. ಶಾಸಕ ಸಂತೋಷ ಲಾಡ್ ಸಮಾರಂಭ ಉದ್ಘಾಟಿಸುತ್ತಾರೆಂದು ಟ್ರಸ್ಟ್ ಅಧ್ಯಕ್ಷ ಭೀಮಪ್ಪ ಕಾಸಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

