4ರಿಂದ ಸಾಂಸ್ಕೃತಿಕ ನೃತ್ಯ ಗಾಯನ ಸ್ಪರ್ಧೆ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸುವರ್ಣ ಮಹೋತ್ಸವದ ಅಂಗವಾಗಿ ಫೆ. 4ರಿಂದ ಮೂರು ದಿನಗಳ ವರೆಗೆ ಇಲ್ಲಿನ ಸವಾಯಿ ಗಂಧರ್ವ ಹಾಲ್ನಲ್ಲಿ ಸಾಂಸ್ಕೃತಿಕ ನೃತ್ಯ ಗಾಯನ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ ಎಂದು ಪಾಲಿಕೆಯ ಸಾಂಸ್ಕೃತಿಕ ಕಾರ್ಯಕ್ರಮ ವಿಭಾಗದ ಅಧ್ಯಕ್ಷ ರಾಘವೇಂದ್ರ ರಾಮದುರ್ಗ ಹೇಳಿದರು. ಗುರುವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಅವಳಿ ನಗರದ ಕಲಾವಿದರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮ ಒಟ್ಟು ಮೂರು ವಿಭಾಗಗಳಲ್ಲಿ ನಡೆಯಲಿದೆ. 8ರಿಂದ 13 ವಯೋವುತಿ, 14ರಿಂದ 20 ವಯೋವುತಿ ಮತ್ತು 21 ವಯಸ್ಸಿನ ಮೇಲ್ಪಟ್ಟ ವಯಸ್ಸಿನವರಿಗೆ ಸ್ಪರ್ಧೆ ಏರ್ಪಡಿಸಲಾಗಿದೆ. ಆಸಕ್ತ ಕಲಾವಿದರು 1,6,7,12 ವಲಯ ಪಾಲಿಕೆ ಕಚೇರಿಯಲ್ಲಿ ಅರ್ಜಿಯನ್ನು ಫೆ. 2ರೊಳಗೆ ಸಲ್ಲಿಸಬೇಕು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಪಾಲಿಕೆ ವಲಯ ಅಧಿಕಾರಿ ಪ್ರಕಾಶ ಗಾಳೆಮ್ಮನವರ, ನೃತ್ಯ ನಿರ್ದೇಶಕ ಕಿರಣ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

