ಸಾಂಪ್ರದಾಯಿಕ ಹಬ್ಬ ಉದ್ಘಾಟನೆ
ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಜು. 1
ಅವಳಿ ನಗರದ ಶಾಲಾ ಮಕ್ಕಳಿಗಾಗಿ ನಗರದ ಇಸ್ಕಾನ್ ಸಂಸ್ಥೆ ವತಿಯಿಂದ ಆಯೋಜಿಸಿರುವ ಸಾಂಸ್ಕೃತಿಕ ಕಾರ್ಯಕ್ರಮ 'ಸಾಂಪ್ರದಾಯಿಕ ಹಬ್ಬ'ದ ಉದ್ಘಾಟನೆ ಸೋಮವಾರ ಜರುಗಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉದ್ಯಮಿ ನರೇಂದ್ರ ಬರ್ವಾಲ, ಶಾಲಾ ಮಕ್ಕಳಿಗಾಗಿ ಇಸ್ಕಾನ್ ನೀಡುವ ಮಧ್ಯಾಹ್ನದ ಊಟ ಅಕ್ಷಯ ಪಾತ್ರೆ ಹಾಗೂ ಮತ್ತಿತರ ಸೇವೆಗಳು ಶ್ಲಾಘನೀಯ ಎಂದು ಹೇಳಿದರು.
ಹು-ಧಾ ಇಸ್ಕಾನ್ ಅಧ್ಯಕ್ಷ ರಾಜೀವ ಲೋಚನ ದಾಸ್ ಮಾತನಾಡಿ, ಈ ಸಾಂಸ್ಕೃತಿಕ ಹಬ್ಬ ಮಕ್ಕಳಿಗೆ ಮನರಂಜನೆ ನೀಡುವ ಜೊತೆಗೆ ಅವರಲ್ಲಿರುವ ಪ್ರತಿಭೆ ಪ್ರದರ್ಶನಗೊಳ್ಳಲು ಅವಕಾಶ ನೀಡುತ್ತದೆ. ಉತ್ತಮ ಶಿಕ್ಷಣ ವಿದ್ಯಾರ್ಥಿಯ ವ್ಯಕ್ತಿತ್ವವನ್ನೇ ಬದಲಾಯಿಸುತ್ತದೆ. ಸಾಂಪ್ರದಾಯಿಕ ಶಿಕ್ಷಣದಿಂದ ಭಾರತೀಯ ಸಂಸ್ಕೃತಿ ಅರಿಯಲು ಸಹಾಯವಾಗುತ್ತದೆ ಎಂದರು.
ಇದೇ ಸಂದರ್ಭ 8ರಿಂದ 10ನೇ ತರಗತಿವರೆಗೆ ಏರ್ಪಡಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿವಿಧ ಶಾಲೆಗಳ 700ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. 1 ಮತ್ತು 2ನೇ ತರಗತಿಯವರಿಗೆ ಆಯೋಜಿಸಿದ್ದ ವೇಷಭೂಷಣ ಸ್ಪರ್ಧೆಯಲ್ಲಿ ಸುಮಾರು 400 ವಿದ್ಯಾರ್ಥಿಗಳು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

