ಖಾಸಗಿ ಬಸ್ಗಳ ಪರವಾನಗಿ ರದ್ದತಿಗೆ ಕದಸಂಸ ಒತ್ತಾಯ
ಹುಬ್ಬಳ್ಳಿ: ಕಾಂಟ್ರಾಕ್ಟ್ ಕ್ಯಾರೇಜ್ ಪರವಾನಗಿ ಪಡೆದು ಸ್ಟೇಜ್ ಕ್ಯಾರೇಜ್ನಡಿ ಸಂಚರಿಸುತ್ತಿರುವ ಖಾಸಗಿ ಬಸ್ಗಳ ಪರವಾನಗಿಯನ್ನು ರದ್ದು ಪಡಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ತಹಸೀಲ್ದಾರ್ಗೆ ಮನವಿ ಸಲ್ಲಿಸಿದರು.
ಹುಬ್ಬಳ್ಳಿಯಿಂದ ಬಾಗಲಕೋಟೆ, ಬಿಜಾಪುರ, ಶಿರಸಿ, ಇಳಕಲ್, ಗದಗ ಮತ್ತು ಬೆಳಗಾವಿಗೆ ಖಾಸಗಿ ಬಸ್ಗಳು ಸಂಚರಿಸುತ್ತಿರುವ ಖಾಸಗಿ ಬಸ್ಗಳು ಮಾರ್ಗಮಧ್ಯೆ ಬರುವ ಪಟ್ಟಣ, ಗ್ರಾಮಗಳಲ್ಲಿ ಪ್ರಯಾಣಿಕರನ್ನು ಭರ್ತಿ ಮಾಡಿಕೊಳ್ಳುತ್ತಿರುವ ಪರಿಣಾಮ ವಾಯವ್ಯ ಕರ್ನಾಟಕ ಸಾರಿಗೆ ಸೇರಿದಂತೆ ಇತರ ಸರ್ಕಾರಿ ಸ್ವಾಮ್ಯದ ಸಾರಿಗೆ ಸಂಸ್ಥೆಗಳಿಗೆ ಪ್ರತಿನಿತ್ಯ ಅಂದಾಜು ರು. 50 ಲಕ್ಷ ನಷ್ಟವಾಗುತ್ತಿದೆ. ಇದರಿಂದಾಗಿ ರಾಜ್ಯ ಸರ್ಕಾರದ ಸಂಸ್ಥೆಯ ಕಾರ್ಮಿಕರಿಗೆ ಮತ್ತು ಸಿಬ್ಬಂದಿಗೆ ಸಕಾಲದಲ್ಲಿ ವೇತನ ಸೇರಿದಂತೆ ಇನ್ನಿತರ ಸೌಲಭ್ಯಗಳು ದೊರೆಯುತ್ತಿಲ್ಲ.
ಖಾಸಗಿ ಬಸ್ ಚಾಲಕರು ವೇಗವಾಗಿ, ನಿರ್ಲಕ್ಷ್ಯದಿಂದ ಬಸ್ ಚಾಲನೆ ಮಾಡುತ್ತಿರುವುದರಿಂದ ಪದೇ ಪದೇ ಅಪಘಾತಗಳು ಸಂಭವಿಸುತ್ತಿವೆ. ಖಾಸಗಿ ಬಸ್ ಚಾಲಕರ ನಿರ್ಲಕ್ಷ್ಯದಿಂದಾಗಿ ಮಕ್ಕಳು, ವೃದ್ಧರು ಅಪಘಾತಕ್ಕೆ ಈಡಾಗುತ್ತಿದ್ದಾರೆ. ಲಾಭದ ಆಮಿಷಕ್ಕೆ ಬಿದ್ದಿರುವ ಖಾಸಗಿ ಬಸ್ಗಳ ಮಾಲೀಕರು ಗೂಂಡಾಗಳ ನೆರವು ಪಡೆದು ಅಕ್ರಮ ದಂಧೆ ಪ್ರಶ್ನಿಸಿದವರಿಗೆ ಬೆದರಿಕೆ ಒಡ್ಡುತ್ತಿದ್ದಾರೆಂದು ಸಮಿತಿ ಪದಾಧಿಕಾರಿಗಳು ಆರೋಪಿಸಿದರು.
ನಗರದ ಸುಜಾತಾ ಟಾಕೀಸ್ ಬಳಿ ಖಾಸಗಿ ಬಸ್ ನಿಲ್ದಾಣಕ್ಕೆ ಮಹಾನಗರ ಪಾಲಿಕೆ ಅನಧಿಕೃತವಾಗಿ ಪರವಾನಗಿ ನೀಡಿದೆ. ಇದರ ಜೊತೆಗ ಬಸವ ವನದ ಹತ್ತಿರವಿರುವ ಭವಾನಿ ಆರ್ಕೇಡ್ನಲ್ಲಿ ಕೂಡ ಸಾಕಷ್ಟು ಖಾಸಗಿ ಬಸ್ಗಳು ನಿಲ್ಲುತ್ತಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ತಕ್ಷಣ ಖಾಸಗಿ ಬಸ್ಗಳ ಮಾಲೀಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

