ಧಾರವಾಡ

ಬೆಂಕಿ ಹಚ್ಚಿ ಮಹಿಳೆ ಕೊಲೆ: ದೂರು

Published On :

ಹುಬ್ಬಳ್ಳಿ: ತಾಲೂಕಿನ ಬಂಡಿವಾಡ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ಪತಿ, ಪತಿ ಸಂಬಂಧಿಕರು ಸೇರಿಕೊಂಡು ತಮ್ಮ ಮಗಳಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ ಎಂದು ಭದ್ರಾಪುರ ಗ್ರಾಮದ ಬಸವರಾಜ ಹುಬ್ಬಳ್ಳಿ ಎಂಬುವರು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸುಮಾರು 5 ವರ್ಷಗಳ ಹಿಂದೆ ಬಂಡಿವಾಡ ಗ್ರಾಮದ ನಾಗಪ್ಪ ಕಮತರ ಎನ್ನುವವರಿಗೆ ತಮ್ಮ ಮಗಳು ಮಂಜುಳಾ ಅವರನ್ನು ವಿವಾಹ ಮಾಡಿಕೊಡಲಾಗಿತ್ತು. ಮದುವೆ ಆದ ದಿನದಿಂದ ಮಂಜುಳಾ ಅವರ ಪತಿ ನಾಗಪ್ಪ ಮತ್ತು ಅವರ ಕುಟುಂಬದವರು ತಮ್ಮ ಮಗಳಿಗೆ ಕಿರುಕುಳ ನೀಡುತ್ತಿದ್ದರು. ಮಂಜುಳಾ ಅವರ ವೈವಾಹಿಕ ಜೀವನ ಸರಿಪಡಿಸುವುದಕ್ಕೆ ಹಲವು ಬಾರಿ ಬಂಡಿವಾಡ ಮತ್ತು ಭದ್ರಾಪುರ ಗ್ರಾಮದ ಹಿರಿಯರು ಮತ್ತು ಸಂಬಂಧಿಕರು ಪ್ರಯತ್ನಿಸಿದ್ದರು. ಆದರೂ ಪದೇ ಪದೇ ಕಿರುಕುಳ ನೀಡುತ್ತಿದ್ದರು ಎಂದು ದೂರಿನಲ್ಲಿ ಆರೋಪ ಮಾಡಿದ್ದಾರೆ.
ಈಗ್ಗೆ ಎರಡು ದಿನಗಳ ಹಿಂದೆ 'ನೀನು ನನಗೆ ಬೇಡ, ನಾನು ಬೇರೆಯವಳನ್ನು ಮದುವೆಯಾಗುತ್ತೇನೆ. ಆದ್ದರಿಂದ ನೀನು ತವರು ಮನಗೆ ಹೋಗು' ಎಂದು ಹೇಳಿದ್ದ ಎಂದು ಬಲ್ಲ ಮೂಲಗಳು ತಿಳಿಸಿವೆ ಎಂದು ತಿಳಿಸಿದ್ದಾರೆ.
ಗುರುವಾರ ಮಧ್ಯಾಹ್ನ ಮಂಜುಳಾ ಅವರು ಮನೆಯಲ್ಲಿ ಒಬ್ಬಳೇ ಇದ್ದ ಸಮಯ ಸಾಧಿಸಿ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎಂದು ದೂರು ನೀಡಿದ್ದಾರೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿಕುಮಾರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ತಹಸೀಲ್ದಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತ ಮಂಜುಳಾ ಅವರ ಪಾರ್ಥಿವ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಕಿಮ್ಸ್‌ಗೆ ರವಾನಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.