ಯುಜಿಸಿ ನಿಯಮಗಳಿಗೆ ವಿರುದ್ಧದ ಕ್ರಮ: ಆರೋಪ
ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಜು. 4
ಯುಜಿಸಿ ನಿಯಮಾವಳಿಗಳಿಗೆ ವಿರುದ್ಧವಾಗಿ ಕಾಯಂ ಉಪನ್ಯಾಸಕರ ಕಾರ್ಯಭಾರ ಹೆಚ್ಚಿಸುವ ಮೂಲಕ ಅತಿಥಿ ಉಪನ್ಯಾಸಕರನ್ನು ಮನೆಗೆ ಕಳುಹಿಸುವ ಕೆಲಸವನ್ನು ಕಾಲೇಜು ಶಿಕ್ಷಣ ಇಲಾಖೆ ಮಾಡುತ್ತಿದೆ ಎಂದು ಅಖಿಲ ಭಾರತ ವಿಶ್ವವಿದ್ಯಾಲಯ ಮತ್ತು ಕಾಲೇಜು ಅಧ್ಯಾಪಕರ ಸಂಘಗಳ ಒಕ್ಕೂಟ ಆರೋಪಿಸಿದೆ.
ಕಾಲೇಜು ಶಿಕ್ಷಣಕ್ಕೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಳ್ಳುವ ಸಂದರ್ಭದಲ್ಲಿ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದ ವಿಧಾನಪರಿಷತ್ ಸದಸ್ಯರು ಮತ್ತು ಕಾಲೇಜು ಅಧ್ಯಾಪಕರ ಒಕ್ಕೂಟದೊಂದಿಗೆ ಚರ್ಚಿಸುತ್ತಿದ್ದು, ಆದರೆ ಕಾಯಂ ಉಪನ್ಯಾಸಕರ ಕಾರ್ಯಭಾರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಸರ್ಕಾರ ಚರ್ಚಿಸಿಲ್ಲ. ಕಳೆದ ಹಲವಾರು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವವರನ್ನು ಕಾಯಂ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದೆ.
ಕಾಲೇಜು ಶಿಕ್ಷಣ ಇಲಾಖೆಯಿಂದ ಪ್ರತಿ ತಿಂಗಳು ಅಧ್ಯಾಪಕರ ಮೌಲ್ಯಮಾಪನ ಆಧಾರದ ಮೇಲೆ ವೇತನ ಬಿಡುಗಡೆ ಮಾಡಬೇಕು ಎಂಬ ಕಾಲೇಜು ಶಿಕ್ಷಣ ಇಲಾಖೆ ಆದೇಶ ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಡುತ್ತದೆ. ಭ್ರಷ್ಟ ಕಾಲೇಜು ಆಡಳಿತ ಮಂಡಳಿಗಳನ್ನು ಇದನ್ನೇ ನೆಪವಾಗಿರಿಸಿಕೊಂಡು ಉಪನ್ಯಾಸಕರಿಗೆ ಅನವಶ್ಯಕ ಕಿರಿಕಿರಿ ನೀಡಿ ಹಣ ವಸೂಲು ಮಾಡುವ ಸಾಧ್ಯತೆ ಇದ್ದು, ಆದ್ದರಿಂದ ಕಾಲೇಜು ಶಿಕ್ಷಣ ಇಲಾಖೆ ಈ ಆದೇಶ ಹಿಂಪಡೆಯಬೇಕು ಎಂದು ಕಾಲೇಜು ಅಧ್ಯಾಪಕರ ಸಂಘಗಳ ಒಕ್ಕೂಟದ ವಲಯ ಕಾರ್ಯದರ್ಶಿ ಡಾ. ಲಿಂಗರಾಜ ಅಂಗಡಿ ಹೇಳಿದ್ದಾರೆ.
7ರಂದು ರಾಷ್ಟ್ರೀಯ ಸಭೆ
ಅಖಿಲ ಭಾರತೀಯ ವಿಶ್ವವಿದ್ಯಾಲಯ ಮತ್ತು ಕಾಲೇಜು ಅಧ್ಯಾಪಕರ ಸಂಘಗಳ ಒಕ್ಕೂಟದ ಕಾರ್ಯಕಾರಿ ಮಂಡಳಿ ಸಭೆ ಜು. 7ರಂದು ಬರೋಡದಲ್ಲಿ ನಡೆಯಲಿದ್ದು, ಈ ಸಭೆಯಲ್ಲಿ ಡಾ. ಲಿಂಗರಾಜ ಅಂಗಡಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕಾರಿ ಸಭೆಯಲ್ಲಿ ಕರ್ನಾಟಕ ಸರ್ಕಾರದ ಶಿಕ್ಷಣ ವಿರೋಧಿ ನೀತಿಗಳ ವಿರುದ್ಧ ಚರ್ಚಿಸಲಿದ್ದಾರೆ. ಕಾರ್ಯಕಾರಿ ಸಭೆಯಲ್ಲಿ ರಾಜ್ಯ ಸರ್ಕಾರದಿಂದ ಯುಜಿಸಿ ಬಾಕಿ ವೇತನ ಬಿಡುಗಡೆ, ಪಿಎಚ್ಡಿ ಶಿಕ್ಷಕರಿಗೆ ವೇತನ ಬಡ್ತಿ, ಪ್ರಾಚಾರ್ಯರ ಹುದ್ದೆ ಬಡ್ತಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

