ಧಾರವಾಡ

ಇಂದು ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಕ್ರಮ

Published On :

ಧಾರವಾಡ: ಮೂಲ ಸೌಕರ್ಯ, ವಾರ್ತಾ ಇಲಾಖೆಗಳ ರಾಜ್ಯ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಜು. 6ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗಾವಿಯಿಂದ ಧಾರವಾಡಕ್ಕೆ ಬೆಳಗ್ಗೆ 10.30ಕ್ಕೆ ಆಗಮಿಸುವರು. 11ಕ್ಕೆ ವಿದ್ಯಾವರ್ಧಕ ಸಂಘದಲ್ಲಿ ಜರುಗುವ ಶಾಲಾ ವನಸಿರಿ, ಸಂಜೆ 4ಕ್ಕೆ ವಿದ್ಯಾಗಿರಿಯ ಜೆಎಸ್ಸೆಸ್ ಕಾಲೇಜಿನಲ್ಲಿ ಜರುಗುವ ಸಾರ್ವಜನಿಕ ಸಮಾರಂಭಗಳಲ್ಲಿ ಪಾಲ್ಗೊಳ್ಳುವರು. ಸಂಜೆ 6ಕ್ಕೆ ಕುಂದಗೋಳಕ್ಕೆ ಆಗಮಿಸಿ ಗ್ರಾಮೀಣ ನಾಟಕೋತ್ಸವ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿ, ರಾತ್ರಿ 7.30ಕ್ಕೆ ಕಲಘಟಗಿಗೆ ತೆರಳಿ ವಾಸ್ತವ್ಯ ಮಾಡುವರು. ಜು. 7ರ ಬೆಳಗ್ಗೆ 9ಕ್ಕೆ ಕಲಘಟಗಿಯಲ್ಲಿ ಸಾರ್ವಜನಿಕರಿಂದ ಕುಂದುಕೊರತೆ ದೂರುಗಳ ಅಹವಾಲು ಸ್ವೀಕರಿಸಿ, 11.30ಕ್ಕೆ ಧಾರವಾಡಕ್ಕೆ ಆಗಮಿಸಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಸಂಜೆ 6.30ಕ್ಕೆ ಹುಬ್ಬಳ್ಳಿಗೆ ಆಗಮಿಸಿ ಬೈಲಪ್ಪನವರ ನಗರದಲ್ಲಿ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬೆಂಗಳೂರಿಗೆ ತೆರಳುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.