ಸುದ್ದಿ ಸಂಕ್ಷೇಪ
ಇಂದು ಶಾಲಾ ವನಸಿರಿ ಕಾರ್ಯಕ್ರಮ
ಧಾರವಾಡ: ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರ ಅಧ್ಯಕ್ಷತೆಯ ಧಾರವಾಡದ ಅವ್ವ ಸೇವಾ ಟ್ರಸ್ಟ್ನಿಂದ ಜು. ರಂದು ಶಾಲಾ ವನಸಿರಿ ಎಂಬ ವಿನೂತನ ಕಾರ್ಯಕ್ರಮ ನಡೆಯಲಿದೆ. ಜು. 6ರಂದು ಬೆಳಗ್ಗೆ 11ಕ್ಕೆ ಆರ್.ಎನ್. ಶೆಟ್ಟಿ ಕ್ರೀಡಾಂಗಣದ ಆವರಣದಲ್ಲಿ ಸರ್ಕಾರಿ ಆದರ್ಶ ಬಾಲಕಿಯರ ಶಾಲೆಯಲ್ಲಿ ಸಾಂಕೇತಿಕವಾಗಿ ಸಸಿ ನೆಡಲಾಗುವುದು. ನಂತರ ವಿದ್ಯಾವರ್ಧಕ ಸಂಘದಲ್ಲಿ ವೇದಿಕೆ ಸಮಾರಂಭ ನಡೆಯಲಿದೆ. ಹು-ಧಾ ನಾಗರಿಕ ಪರಿಸರ ಸಮಿತಿಯು ಸಹಕಾರ ನೀಡುತ್ತಿದೆ. ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಉದ್ಘಾಟಿಸುತ್ತಾರೆ. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಸಸಿಗಳನ್ನು ವಿತರಣೆ ಮಾಡುತ್ತಾರೆ ಎಂದು ಬಸವರಾಜ ಹೊರಟ್ಟಿ ಅವರು ತಿಳಿಸಿದ್ದಾರೆ.
28ರಂದು ಹವ್ಯಕ ಹಬ್ಬ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಹವ್ಯಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ಜು. 28ರಂದು ಹವ್ಯಕ ಹಬ್ಬ ಆಚರಿಸಲಾಗುವುದು ಎಂದು ಹವ್ಯಕ ಸಂಘದ ಜಿಲ್ಲಾಧ್ಯಕ್ಷ ಎಂ.ಕೆ. ಹೆಗಡೆ ಹೇಳಿದರು. ಶುಕ್ರವಾರ ಸುದ್ದಗೋಷ್ಠಿಯಲ್ಲಿ ಮಾತನಾಡಿದ ಅವರು, ಲೂತಿಮಠ ಲೇಔಟ್ನಲ್ಲಿ 3300 ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಿಸಿರುವ ಹವ್ಯಕ ಭವನದಲ್ಲಿ ಹಬ್ಬದ ನಿಮಿತ್ತ ಲೋಕಕಲ್ಯಾಣಾರ್ಥ 1008 ಸತ್ಯನಾರಾಯಣ ಪೂಜೆ ಮುಂತಾದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಲೂತಿಮಠ ಲೇಔಟ್ನಲ್ಲಿ ಹವ್ಯಕ ಭವನ ಇನ್ನೂ ನಿರ್ಮಾಣ ಹಂತದಲ್ಲಿದ್ದು, ಭವಿಷ್ಯದಲ್ಲಿ ಎಲ್ಲ ಸಮುದಾಯಗಳ ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ನೀಡಲಾಗುವುದು. ಹವ್ಯಕ ಹಬ್ಬದ ನಿಮಿತ್ತ ಆಯೋಜಿಸಿರುವ ಶ್ರೀ ಸತ್ಯನಾರಾಯಣ ಪೂಜೆಯಲ್ಲೂ ಎಲ್ಲ ಸಮುದಾಯದವರನ್ನು ಸೇರಿಸಿಕೊಳ್ಳಲಾಗಿದೆ. ಜು. 28ರಂದು ನಡೆಯಲಿರುವ ಹವ್ಯಕ ಹಬ್ಬದ ನಿಮಿತ್ತ ಹವ್ಯಕ ಸಮಾಜವನ್ನು ವೈಶಿಷ್ಟ್ಯತೆ ಪ್ರತಿಬಿಂಬಿಸುವ ಕರಾವಳಿ ಶೈಲಿ ತಿನಿಸು, ಪ್ರದರ್ಶನ ಕಲೆ ಮತ್ತು ಗಾಯನ ಕಲೆಗಳನ್ನು ಪ್ರದರ್ಶಿಸಲಾಗುವುದು ಎಂದು ತಿಳಿಸಿದರು. 25 ವರ್ಷಗಳಿಂದ ಹುಬ್ಬಳ್ಳಿ ನಗರದಲ್ಲಿ ಹವ್ಯಕ ಹಬ್ಬ ಆಚರಿಸಿಕೊಂಡು ಬರಲಾಗುತ್ತಿದ್ದು, ಎಸ್ಸೆಸ್ಸೆಲ್ಸಿಯಿಂದ ಹಿಡಿದು ಪದವಿವರೆಗಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಸೂಕ್ತ ಬೆಂಬಲ ನೀಡಲಾಗುವುದು. ಸಾಮೂಹಿಕ ಸತ್ಯನಾರಾಯಣ ಪೂಜೆಯಲ್ಲಿ ಪಾಲ್ಗೊಳ್ಳಲಿಚ್ಛಿಸುವವರು ರು. 250 ದೇಣಿಗೆ ಪಾವತಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು ಎಂದವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಹವ್ಯಕ ಸಂಘದ ಉಪಾಧ್ಯಕ್ಷ ಶಿವರಾಮ ಹೆಗಡೆ, ಪ್ರಧಾನ ಕಾರ್ಯದರ್ಶಿ ಡಿ.ಎನ್. ಭಟ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

