ಧಾರವಾಡ

ಸುದ್ದಿ ಸಂಕ್ಷೇಪ

Published On :

ಇಂದು ಇಂಡಕ್ಷನ್ ಕಾರ್ಯಕ್ರಮ
ಧಾರವಾಡ: ಇಲ್ಲಿನ ಕಿಟಲ್ ಕಾಲೇಜಿನಲ್ಲಿ ಬಿ.ಎ. ಪ್ರಥಮ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗಾಗಿ ಜು. 6 ರಂದು ಇಂಡಕ್ಷನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯ ಮಹಿಳಾ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಮೀನಾ ಚಂದಾವಕರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕಾಲೇಜಿನ ಪ್ರಾಚಾರ್ಯ ಡಾ. ಮಾರ್ಟಿನ್ ಪುನೀತ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಧಾರವಾಡ ಅಭಿನಂದನಾ ಸಮಾರಂಭ ಇಂದು
ಧಾರವಾಡ: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಇಲ್ಲಿನ ಸರ್ಕಾರಿ ನೌಕರ ಭವನದಲ್ಲಿ ಜು. 6ರಂದು ಮಧ್ಯಾಹ್ನ 3ಕ್ಕೆ ನಿರಂತರ ವ್ಯಾಪಕ ಮೌಲ್ಯಮಾಪನ ಕಾರ್ಯಾಗಾರ ಹಾಗೂ ಅಭಿನಂದನಾ ಸಮಾರಂಭ ಹಮ್ಮಿಕೊಂಡಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಶಾಸಕರಾದ ವಿನಯ ಕುಲಕರ್ಣಿ, ಸಿ.ಎಸ್. ಶಿವಳ್ಳಿ, ಪ್ರಸಾದ ಅಬ್ಬಯ್ಯ, ಅರವಿಂದ ಬೆಲ್ಲದ, ಎನ್.ಎಚ್. ಕೋನರೆಡ್ಡಿ ಭಾಗವಹಿಸಲಿದ್ದು, ಶಿಕ್ಷಣ ಇಲಾಖೆಯ ಎ.ಎನ್. ಪಾಟೀಲ, ಜಿ.ಎಸ್. ನಾಯಿಕ, ಸಿದ್ದರಾಮಯ್ಯ ಮುನವಳ್ಳಿ, ಡಾ. ಬಿ.ಕೆ.ಎಸ್. ವರ್ಧನ ಅತಿಥಿಗಳಾಗಿ ಆಗಮಿಸಲಿದ್ದಾರೆ. ಬಸವರಾಜ ಗುರಿಕಾರ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಟಕಣೆ ತಿಳಿಸಿದೆ.

ನೇಣು ಬಿಗಿದು ಆತ್ಮಹತ್ಯೆ
ಹುಬ್ಬಳ್ಳಿ: ಡಿಪ್ಲೊಮಾ ಪರೀಕ್ಷೆಯಲ್ಲಿ ಅನುತ್ತೀರ್ಣನಾಗಿದ್ದ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಧಾರವಾಡದ ಸಿಲ್ವರ್ ಅರ್ಚಿಡ್‌ನಲ್ಲಿ ಡಿಪ್ಲೋಮಾ ವ್ಯಾಸಂಗ ಮಾಡುತ್ತಿದ್ದ ಚೇತನಕುಮಾರ್ ಈರಪ್ಪ ನಾಗೂರ (20) ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಎಂದು ದೂರು ದಾಖಲಾಗಿದ್ದು ತನಿಖೆ ಮುಂದುವರಿದಿದೆ.

ರಾಮಚಂದ್ರ ಮನ್ನಾರಿ
ಹುಬ್ಬಳ್ಳಿ: ಧಾರಾವಾಡದ ಮುಗದ ಸರ್ವೋದಯ ಶಿಕ್ಷಣ ಟ್ರಸ್ಟ್‌ನ ನಿವೃತ್ತ ಮುಖ್ಯ ಶಿಕ್ಷಕ ರಾಮಚಂದ್ರ ಎಸ್. ಮನ್ನಾರಿ ಅವರು ನಿಧನರಾದರು. ಅವರಿಗೆ 67 ವರ್ಷ ವಯಸ್ಸಾಗಿತ್ತು. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಹಾಗೂ ಒಬ್ಬ ಪುತ್ರ ಇದ್ದಾರೆ.
ಕಾಶವ್ವ ಉಡಕೇರಿ
ಧಾರವಾಡ: ತಾಲೂಕಿನ ಹಾರೋಬೆಳವಡಿ ಗ್ರಾಮದ ನಿವಾಸಿ ಕಾಶವ್ವ ಸೋಮಪ್ಪ ಉಡಕೇರಿ(78) ಇತ್ತೀಚೆಗೆ ನಿಧನರಾದರು. ಮೃತರಿಗೆ ಓರ್ವ ಪುತ್ರಿ, ಓರ್ವ ಪುತ್ರ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗ ಇದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.