ಧಾರವಾಡ

ಮಕ್ಕಳಿಲ್ಲದ ಕೆಲ ಶಾಲೆ ಜೂಜುಕೋರರ ಅಡ್ಡೆ

Published On :

ಧಾರವಾಡ: ನಗರ ಪ್ರದೇಶದ ವ್ಯಾಮೋಹದಿಂದ ಪ್ರಸ್ತುತ ಗ್ರಾಮೀಣ ಪ್ರದೇಶದಲ್ಲಿ ಜನಸಂಖ್ಯೆ ಪ್ರಮಾಣ ಕಡಿಮೆಯಾಗುತ್ತಿದೆ. ಇದರ ಪ್ರಭಾವದಿಂದ ರಾಜ್ಯದಲ್ಲಿನ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಲ್ಲದ ಕಾರಣ ಜೂಜುಕೋರರ ಅಡ್ಡೆಯಾಗಿವೆ. ಸರ್ಕಾರಿ ಶಾಲೆಗಳಲ್ಲಿ ಪ್ರವೇಶ ಪಡೆಯುವ ಮಕ್ಕಳ ಸಂಖ್ಯೆ ಕ್ಷೀಣಿಸುತ್ತಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಖೇದ ವ್ಯಕ್ತಪಡಿಸಿದರು.
ಇಲ್ಲಿನ ಸರ್ಕಾರಿ ನೌಕರರ ಭವನದಲ್ಲಿ ಶನಿವಾರ ನಡೆದ ನಿರಂತರ ವ್ಯಾಪಕ ಮೌಲ್ಯಮಾಪನ ಕಾರ್ಯಾಗಾರ ಹಾಗೂ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಹೆಚ್ಚಾನು ಹೆಚ್ಚು ಜನತೆ ಅನೇಕ ಕಾರಣಗಳಿಂದ ನಗರವಾಸಿಯಾಗುತ್ತಿದ್ದಾರೆ. ನಗರಕ್ಕೆ ವಲಸೆ ಬಂದ ಪಾಲಕರು ಅವರ ನಗರದ ವಿವಿಧ ಶಾಲೆಗಳಿಗೆ ಸೇರಿಸುತ್ತಿದ್ದಾರೆ.
ಸೌಲಭ್ಯದ ಚಿಂತನೆ: ಗ್ರಾಮೀಣ ಪ್ರದೇಶದಲ್ಲಿ ಜನಸಂಖ್ಯೆ ಆಧಾರಿಸಿ ಈ ಹಿಂದೆ ಸರ್ಕಾರ ಅಗತ್ಯಕ್ಕೆ ತಕ್ಕಂತೆ ಒಂದೇ ಗ್ರಾಮದಲ್ಲಿ ಮೂರು ಅಥವಾ ನಾಲ್ಕು ಶಾಲೆಗಳನ್ನು ನಿರ್ಮಿಸಿತ್ತು. ಆದರೆ, ಇದೀಗ ಸಾಕಷ್ಟು ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗಿದ್ದರಿಂದ ಶಾಲೆಯ ಶಿಕ್ಷಕ ವೃಂದ, ಗ್ರಾಮ ಪಂಚಾಯ್ತಿ ಹಾಗೂ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸುವ ಮೂಲಕ ಒಂದೇ ಶಾಲೆಯನ್ನು ನಡೆಸುವ ಅಭಿಪ್ರಾಯವಿದೆ. ಅಂಥ ಶಾಲೆಗಳಿಗೆ ಖಾಸಗಿ ಶಾಲೆಯ ಸೌಲಭ್ಯ ಒದಗಿಸುವ ಚಿಂತನೆ ಸರ್ಕಾರ ನಡೆಸುತ್ತಿದೆ ಎಂದರು.
ನೂತನ ಶಾಸಕರಾದ ಪ್ರಸಾದ ಅಬ್ಬಯ್ಯ, ಸಿ.ಎಸ್. ಶಿವಳ್ಳಿ, ವಿನಯ ಕುಲಕರ್ಣಿ ಅವರಿಗೆ ಸಂಘದಿಂದ ಸನ್ಮಾನಿಸಲಾಯಿತು. ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ಗುರಿಕಾರ ಮಾತನಾಡಿದರು. ಶಿಕ್ಷಣ ಇಲಾಖೆ ಅಪರ ಆಯುಕ್ತ ಎ.ಎನ್. ಪಾಟೀಲ, ಉಪನಿರ್ದೇಶಕ ಡಾ. ಬಿ.ಕೆ.ಎಸ್. ವರ್ಧನ, ಸಹ ನಿರ್ದೇಶಕ ಸಿದ್ದರಾಮ ಮುನವಳ್ಳಿ, ನಿರ್ದೇಶಕ ಜಿ.ಎಸ್. ನಾಯಿಕ, ಕ್ಷೇತ್ರ ಶಿಕ್ಷಣಾಧಿಕಾರಿ ಗಿರೀಶ ಪದಕಿ, ಶಿಕ್ಷಕ ಜಗುಚಂದ್ರ ಕೂಡ್ಲ, ಎಂ.ಸಿ. ಸವಣೂರ, ಪ್ರೇಮಾ ಆರಟ್ಟಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.