ಬಾಂಬ್ ಸ್ಫೋಟ ಖಂಡಿಸಿ ಪ್ರತಿಭಟನೆ
ಹುಬ್ಬಳ್ಳಿ: ಬಿಹಾರದ ಬೋಧಗಯಾದಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಖಂಡಿಸಿ ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಬಾಂಬ್ ಸ್ಫೋಟಿಸಿದ ಉಗ್ರರನ್ನು ಶೀಘ್ರ ಬಂಧಿಸಿ, ಸಾರ್ವಜನಿಕ ಸ್ಥಳದಲ್ಲಿ ಅವರನ್ನು ದಂಡಿಸಬೇಕು. ಭವಿಷ್ಯದಲ್ಲಿ ಯಾವುದೇ ಉಗ್ರರು ಇಂಥ ಹೇಯ ಕೃತ್ಯಗಳನ್ನು ನಡೆಸಲು ಧೈರ್ಯ ತೋರದಂತೆ ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು.
ಬಾಂಬ್ ಸ್ಫೋಟ ಖಂಡಿಸಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ತಹಸೀಲ್ದಾರ್ ಕಚೇರಿ ಅಧಿಕಾರಿಗಳ ಮೂಲಕ ರಾಷ್ಟ್ರಪತಿ ಪ್ರಣಬ ಮುಖರ್ಜಿ, ಪ್ರಧಾನಿ ಮನಮೋಹನಸಿಂಗ್, ಗೃಹ ಸಚಿವ ಸುಶೀಲಕುಮಾರ ಶಿಂದೆ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಹು-ಧಾ ಮಹಾನಗರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ರಾಜಣ್ಣ ಕೊರವಿ, ಈ ರೀತಿಯ ಹೀನ ಕೃತ್ಯದಿಂದ ಉಗ್ರಗಾಮಿಗಳು ಏನನ್ನೂ ಸಾಧಿಸಿದಂತಾಗುವುದಿಲ್ಲ. ಉಗ್ರರ ಈ ಕೃತ್ಯಗಳಿಗೆ ಕಡಿವಾಣ ಹಾಕಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಜೆಡಿಎಸ್ನ ಸುಧಾಕರ ಶೆಟ್ಟಿ, ಕಿರಣ ಹಿರೇಮಠ, ಮೇಘರಾಜ ಹಿರೇಮನಿ, ಇರಶಾದ ಭದ್ರಾಪುರ, ಶಂಕರ ಧಾರವಾಡ, ಈರಣ್ಣ ತಿಳಿದಾಳ, ರಾಮಣ್ಣ ಹೆಬ್ಬಳ್ಳಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

