ಇಂದು ಕಂಪ್ಯೂಟರ್ ತರಬೇತಿ ಶಾಖೆ ಉದ್ಘಾಟನೆ
ಧಾರವಾಡ: ಎಚ್‌ಕೆ-ಎನ್‌ಜಿಟೆಕ್ ಸಂಸ್ಥೆ ಕಂಪ್ಯೂಟರ್ ತರಬೇತಿ ನೀಡಲು ಇಲ್ಲಿನ ಕಲಾಭವನ ಸಮೀಪದ ಓಸ್‌ವಾಲ್ ಟವರ್‌ನಲ್ಲಿ ನೂತನ ಶಾಖೆ ತೆರೆಯುತ್ತಿದೆ ಎಂದು ಶಾಖೆಯ ಆಡಳಿತಾಧಿಕಾರಿ ಮಂಜುನಾಥ ಭಟ್ ಹೇಳಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜು. 10ರಂದು ಬೆಳಗ್ಗೆ 9.30ಕ್ಕೆ ಸಿತಾರ್ ವಾದಕ ಹಮೀದ್ ಖಾನ್ ಶಾಖೆ ಉದ್ಘಾಟಿಸಲಿದ್ದಾರೆ. ಕಂಪ್ಯೂಟರ್ ತರಬೇತಿ ಕೇಂದ್ರ ರಿಯಾಯಿತಿ ಶುಲ್ಕದಲ್ಲಿ ಆರಂಭಗೊಳ್ಳಲಿದೆ. 18 ವರ್ಷಗಳಿಂದ ಕಂಪ್ಯೂಟರ್ ಸಾಫ್ಟ್‌ವೇರ್, ವೆಬ್‌ಸೈಟ್ ಡಿಸೈನ್‌ನಲ್ಲಿ ನಿರಂತವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆ ಇದಾಗಿದ್ದು, ವಿನೂತನವಾಗಿ ಕಂಪ್ಯೂಟರ್ ಶಿಕ್ಷಣ ನೀಡುವ ಉದ್ದೇಶದಿಂದ ಈ ತರಬೇತಿ ಕೇಂದ್ರ ಆರಂಭಿಸಲಾಗುತ್ತಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಪ್ರಾಚಾರ್ಯ ಈಶ್ವರ ಭಟ್, ಡಾ. ವಿನಾಯಕ ಹಳಮನೆ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

