ಧಾರವಾಡ

ಹುಬ್ಬಳ್ಳಿಯಲ್ಲಿ ಇನ್ಫೋಸಿಸ್ ಶಾಖೆ

Published On :

ಬೆಂಗಳೂರು: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇನ್ಫೋಸಿಸ್ ಶಾಖೆ ಪ್ರಾರಂಭಿಸುವ ಬಗ್ಗೆ ಇನ್ಫೋಸಿಸ್ ಅಧ್ಯಕ್ಷ ಎನ್.ಆರ್. ನಾರಾಯಣಮೂರ್ತಿ ಇಂಗಿತ ವ್ಯಕ್ತಪಡಿಸಿದ್ದಾರೆ. ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಎಸ್.ಆರ್. ಪಾಟೀಲ್ ಇನ್ಫೋಸಿಸ್ ಸಂಸ್ಥೆ, ಎಲೆಕ್ಟ್ರಾನಿಕ್ ಸಿಟಿಗೆ ಮಂಗಳವಾರ ಭೇಟಿ ನೀಡಿದ ಸಂದರ್ಭದಲ್ಲಿ ನಾರಾಯಣಮೂರ್ತಿ ಈ ಬಗ್ಗೆ ಸುಳಿವು ನೀಡಿದ್ದಾರೆ. ಬೆಂಗಳೂರು ಹೊರತುಪಡಿಸಿ ರಾಜ್ಯದ 2ನೇ ಹಂತದ ನಗರಗಳಲ್ಲಿ ಸಾಫ್ಟ್‌ವೇರ್ ಕಂಪನಿಗಳನ್ನು ಪ್ರಾರಂಭಿಸುವಂತೆ ನಾರಾಯಣಮೂರ್ತಿ ಹಾಗೂ ಎಲೆಕ್ಟ್ರಾನಿಕ್ ಸಿಟಿಯ ಇತರ ಸಾಫ್ಟ್‌ವೇರ್ ದಿಗ್ಗಜರಿಗೆ ಸಚಿವ ಪಾಟೀಲ್ ಮನವಿ ಮಾಡಿದ್ದಾರೆ. ಈ ಸಂಬಂಧ ಎಲ್ಲ ಸೌಕರ್ಯ ನೀಡಲು ರಾಜ್ಯ ಸರ್ಕಾರ ಬದ್ಧವಾಗಿದೆ. ಜಾಗತಿಕ, ದೇಶ ಮಟ್ಟದಲ್ಲಿ ರಾಜ್ಯದ ಹೆಮ್ಮೆಯಾಗಿರುವ ಸಾಫ್ಟ್‌ವೇರ್ ಉದ್ಯಮವು ಉದ್ಯೋಗ ಸೃಷ್ಟಿ ದೃಷ್ಟಿಯಿಂದ ಅನಿವಾರ್ಯ ಎಂದು ಸಚಿವರು ಉದ್ಯಮಿಗಳಿಗೆ ವಿವರಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ನಾರಾಯಣಮೂರ್ತಿ, ಕಡಿಮೆ ಭೂಮಿ ಬಳಕೆಯಿಂದ ಹೆಚ್ಚಿನ ಉದ್ಯೋಗವನ್ನು ಸಾಫ್ಟ್‌ವೇರ್ ಉದ್ಯಮದಿಂದ ಸೃಷ್ಟಿಸಬಹುದು. ರಾಜ್ಯದ ಜಿಡಿಪಿಯ ಅರ್ಧಭಾಗವನ್ನು ಬೆಂಗಳೂರು ಭರಿಸುತ್ತಿದೆ. ದೇಶದ ಐಟಿ ರಫ್ತಿನಲ್ಲಿ ರಾಜ್ಯ ಶೇ. 36 ಪ್ರಮಾಣವನ್ನು ಹೊಂದಿದೆ. ರಾಜ್ಯ ಸರ್ಕಾರ ಈ ಪ್ರಾಮುಖ್ಯತೆ ಅರಿತು ಕಾರ್ಯ ನಿರ್ವಹಿಸಬೇಕಿದೆ ಎಂದಿದ್ದಾರೆ. ಸಚಿವರು ಎಲೆಕ್ಟ್ರಾನಿಕ್ ಸಿಟಿ ಕೈಗಾರಿಕೆ ಸಂಘದ ಪದಾಧಿಕಾರಿಗಳ ಜತೆ ಸಭೆ ನಡೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.