ಡಿಪ್ಲೊಮಾ ಪ್ರವೇಶ ತಿಂಗಳಲ್ಲಿ ಪೂರ್ಣ
ಹುಬ್ಬಳ್ಳಿ: ಡಿಪ್ಲೊಮಾ ಶಿಕ್ಷಣಕ್ಕೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಆನ್ಲೈನ್ ಅರ್ಜಿ ಸಲ್ಲಿಸುವಿಕೆ ಮತ್ತು ಕೌನ್ಸೆಲಿಂಗ್ ಅಳವಡಿಸಿಕೊಂಡಿದ್ದರಿಂದ ರಾಜ್ಯಾದ್ಯಂತ ಪ್ರವೇಶ ಪ್ರಕ್ರಿಯೆ ತಿಂಗಳ ಅವಧಿಯಲ್ಲಿ ಪೂರ್ಣಗೊಳ್ಳಲಿದೆ ಎಂದು ತಾಂತ್ರಿಕ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕ ಎಚ್.ಯು. ತಳವಾರ ಹೇಳಿದ್ದಾರೆ.
ಶುಕ್ರವಾರ ಇಲ್ಲಿನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಮಹಾವಿದ್ಯಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳ ಪ್ರವೇಶಾತಿ ಪ್ರಕ್ರಿಯೆ ತಾಂತ್ರಿಕ ಶಿಕ್ಷಣ ಇಲಾಖೆಯಿಂದ ನಡೆಯುತ್ತಿದ್ದು, ಕಳೆದ ವರ್ಷ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿತ್ತು. ಇಲಾಖೆ ವತಿಯಿಂದ ಅದರಲ್ಲೂ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವಿಕೆ ಮತ್ತು ಕೌನ್ಸೆಲಿಂಗ್ ನಡೆಯುತ್ತಿರುವುದರಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣದಿಂದ ವಂಚಿತರಾಗಿಲ್ಲ. ಹೀಗಾಗಿ ಈ ಬಾರಿ ಎಲ್ಲಿಯೂ ಪ್ರವೇಶ ಪ್ರಕ್ರಿಯೆ ಬಗ್ಗೆ ಅಪಸ್ವರ ಬಂದಿಲ್ಲ.
ಮೊದಲನೇ ಸುತ್ತಿನ ಕೌನ್ಸೆಲಿಂಗ್ ಪೂರ್ಣಗೊಂಡಿದ್ದು, ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಶೇ. 85ರಷ್ಟು ಸೀಟುಗಳು ಭರ್ತಿಯಾಗಿವೆ. ಇನ್ನು ಎರಡು ಹಂತದಲ್ಲಿ ಕೌನ್ಸೆಲಿಂಗ್ ನಡೆಯಲಿದೆ ಎಂದು ತಿಳಿಸಿದರು.
ಹಲವಾರು ಅನುದಾನಿತ ಪಾಲಿಟೆಕ್ನಿಕ್ ಕಾಲೇಜು ಆಡಳಿತ ಮಂಡಳಿಗಳು ಈ ಬಾರಿ ತಮ್ಮ ಮ್ಯಾನೆಜ್ಮೆಂಟ್ ಕೋಟಾವನ್ನು ಕೂಡ ಸರ್ಕಾರಕ್ಕೆ ಮರಳಿಸುತ್ತಿದ್ದಾರೆ. ಆನ್ಲೈನ್ ಪ್ರವೇಶ ಪ್ರಕ್ರಿಯೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳು ಪಾಲ್ಗೊಳ್ಳುತ್ತಿರುವುದರಿಂದ ಅನುದಾನಿತ ಕಾಲೇಜುಗಳ ಆಡಳಿತ ಮಂಡಳಿಗಳೂ ತಮ್ಮ ಶಿಕ್ಷಣ ಸಂಸ್ಥೆಗಳಲ್ಲಿ ಪ್ರತಿಭಾವಂತರಿಗೆ ಅವಕಾಶ ದೊರೆಯಲಿದೆ ಎಂದು ಈ ತೀರ್ಮಾನಕ್ಕೆ ಬಂದಿರುವ ಸಾಧ್ಯತೆ ಇದೆ. ರಾಜ್ಯದ ನಾಲ್ಕು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳು ಡಿಪ್ಲೋಮಾ ಪ್ರವೇಶಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮೊರೆ ಹೋಗಿರುವುದರಿಂದ ಸದ್ಯಕ್ಕೆ ಯಥಾಸ್ಥಿತಿ ಕಾಯ್ದುಕೊಳ್ಳಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

