ಧಾರವಾಡ

ಮನೆ ಬಾಡಿಗೆ ಪರಿಷ್ಕರಣೆ: ಸ್ವಾಗತ

Published On :

ಧಾರವಾಡ: ರಾಜ್ಯದ ನಗರ, ಗ್ರಾಮೀಣ ಪ್ರದೇಶಗಳನ್ನು ಕೇಂದ್ರ ಸರ್ಕಾರದ ವರ್ಗೀಕರಣದನ್ವಯ ಎ, ಬಿ ಮತ್ತು ಸಿ ದರ್ಜೆಗಳಾಗಿ ಪುನರ್ ವರ್ಗೀಕರಿಸಿ ರಾಜ್ಯ ಸರ್ಕಾರಿ ನೌಕರರ ಮನೆ ಭಾಡಿಗೆ ಭತ್ಯೆಯನ್ನು ಪರಿಷ್ಕರಿಸಲಾಗುವುದೆಂದು ಹೇಳಿರುವ ಮುಖ್ಯಮಂತ್ರಿಗಳ ಬಜೆಟ್ ಪ್ರಕಟಣೆಯನ್ನು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಜಿಲ್ಲಾ ಘಟಕ ಸ್ವಾಗತಿಸಿದೆ. ಮಹಾನಗರ ಪಾಲಿಕೆಗಳಿರುವ ರಾಜ್ಯದ ಎಲ್ಲ ಮಹಾನಗರ ಪ್ರದೇಶಗಳ ಕೇಂದ್ರ ಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಮನೆ ಬಾಡಿಗೆ ಭತ್ಯೆ ಲಭಿಸಲಿದೆ. ಗ್ರಾಮೀಣ ಪ್ರದೇಶಗಳನ್ನೂ ವರ್ಗೀಕರಿಸಿ ಹೊಸ ಮನೆ ಬಾಡಿಗೆಯನ್ನು ನಿಗದಿ ಮಾಡಲು ಚಿಂತಿಸಲಾಗಿದೆ. ಇತ್ತೀಚೆಗೆ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟವೂ ಬೇಡಿಕೆ ದಿನಾಚರಣೆ ಆಚರಿಸುವ ಮೂಲಕ ಸರ್ಕಾರದ ಮೇಲೆ ತಂದ ಒತ್ತಡದಿಂದಾಗಿ ಮುಖ್ಯಮಂತ್ರಿಗಳು ತಮ್ಮ ಬಜೆಟ್ ಭಾಷಣದ ಮೂಲಕ ಒಕ್ಕೂಟದ ಬೇಡಿಕೆಯನ್ನು ಈಡೇರಿಸಿದ್ದಾರೆಂದು ಹೇಳಿರುವ ಒಕ್ಕೂಟದ ಜಿಲ್ಲಾಧ್ಯಕ್ಷ ರಾಮಚಂದ್ರ ಮುದಗಣ್ಣವರ, ಉಪಾಧ್ಯಕ್ಷ ಗುರುಮೂರ್ತಿ ಯರಗಂಬಳಿಮಠ, ರಾಜ್ಯ ಪರಿಷತ್ ಸದಸ್ಯ ವಿ.ಆರ್. ನರಗುಂದ, ಪ್ರಧಾನ ಕಾರ್ಯದರ್ಶಿ ಮುರುಘೇಶ ಸವಣೂರ, ಮಂಜುನಾಥ ಹೆಗಡೆ ಅವರು ಮುಖ್ಯಮಂತ್ರಿಗಳನ್ನು ಅಭಿನಂದಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.