ಧಾರವಾಡ

ಬಜೆಟ್ ಭಾಷಣದಲ್ಲೂ ರಾಜಕೀಯ

Published On :

ಹುಬ್ಬಳ್ಳಿ:  ರಾಜ್ಯಪಾಲರ ಭಾಷಣವನ್ನು ರಾಜಕೀಯಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಭಾಷಣವನ್ನು ರಾಜಕೀಯಗೊಳಿಸಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ಪ್ರಹ್ಲಾದ ಜೋಶಿ ಆರೋಪಿಸಿದ್ದಾರೆ.
ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಕುರಿತು ಪ್ರತಿಕ್ರಿಯಿಸಿರುವ ಅವರು, ಬಿಜೆಪಿ ಆಡಳಿತಾವಧಿಯಲ್ಲಿ ಆರ್ಥಿಕ ಸ್ಥಿತಿ ಹದಗೆಟ್ಟಿದೆ ಎಂದು ಹೇಳುತ್ತಿರುವ ಸಿಎಂ ಸಿದ್ದರಾಮಯ್ಯ ಅವರು ಆರ್ಥಿಕ ಪರಿಸ್ಥಿತಿ ಕುರಿತು ಶ್ವೇತ ಪತ್ರ ಹೊರಡಿಸಲಿ ಎಂದು ಸವಾಲು ಹಾಕಿದ್ದಾರೆ.  ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್‌ನಲ್ಲಿ ಅಂಕಿ ಅಂಶಗಳೊಂದಿಗೆ ಆಟ ಆಡಿ ಸಣ್ಣ ಪುಟ್ಟ ಬದಲಾವಣೆಗಳೊಂದಿಗೆ ಸರ್ಕಸ್ ಮಾಡಿದ್ದಾರೆ. ನಿರ್ಧಿಷ್ಟ ವರ್ಗಗಳನ್ನು ಓಲೈಸುವ ಪ್ರಯತ್ನ ಮಾಡಿರುವ ಅವರು ರಾಜ್ಯದ ಅಭಿವೃದ್ಧಿಗೆ ಅಗತ್ಯವಿರುವ ದೂರಗಾಮಿ ಯೋಜನೆಗಳನ್ನು ಕೈಗೆತ್ತಿಕೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಚಿಲ್ಲರೆ ಮಾರಾಟ ಕ್ಷೇತ್ರಕ್ಕೆ ವಿದೇಶಿ ಬಂಡವಾಳ ಹೂಡಿಕೆಗೆ ಅನುಮತಿ ನೀಡುವ ಮೂಲಕ ಸಣ್ಣ ವ್ಯಾಪಾರಸ್ಥರ ವಿನಾಶಕ್ಕೆ ಕಾರಣವಾಗಿರುವ ಸರ್ಕಾರ ಮುಂಗಡ ಪತ್ರದಲ್ಲಿ ಈ ವರ್ಗಕ್ಕೆ ಬಲ ತುಂಬುವ ನಿಟ್ಟಿನಲ್ಲಿ ಯೋಜನೆಗಳನ್ನು ಹಮ್ಮಿಕೊಂಡಿಲ್ಲ ಎಂದು ಹೇಳಿದ್ದಾರೆ.  ಹೊಸ ತಾಲೂಕುಗಳ ರಚನೆಯನ್ನು ಕೈಬಿಡುವ ಮೂಲಕ ಸರ್ಕಾರ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ.
ಹೈದ್ರಾಬಾದ್ ಕರ್ನಾಟಕಕ್ಕೆ 371 ಜೆ ಕಲಂ ಅನ್ವಯ  ಕೇಂದ್ರ ನೀಡಿರುವ ವಿಶೇಷ ಸ್ಥಾನಮಾನದ ಲಾಭ ಪಡೆಯುವ ನಿಟ್ಟಿನಲ್ಲಿ ನೀತಿ ರೂಪಿಸದಿರುವುದು ಆಶ್ಚರ್ಯಕರ ಸಂಗತಿ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.