ಧಾರವಾಡ

ಬಜೆಟ್‌ಗೆ ವಿಷಾದ

Published On :

ಧಾರವಾಡ: ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳು ರಾಜ್ಯದ ಬೆಂಗಳೂರಿನ ನಂತರ ಅತೀ ದೊಡ್ಡ ನಗರಗಳು. ಆದರೆ, ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಅವಳಿ ನಗರದ ಮೂಲಸೌಕರ್ಯದ ಅಭಿವೃದ್ಧಿಗೆ ಹಣ ಒದಗಿಸದಿರುವುದು ವಿಷಾದನೀಯ ಎಂದು ಹು-ಧಾ ಮಹಾನಗರ ಅಭಿವೃದ್ಧಿ ಸಂಘವು ಅಭಿಪ್ರಾಯಿಸಿದೆ. ಪತ್ರಿಕಾ ಪ್ರಕಟಣೆ ಮೂಲಕ ಸಂಘದ ವಿಠ್ಠಲ ಕಮ್ಮಾರ, ಈ ಹಿಂದಿನ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪಾಲಿಕೆಗೆ ನೀಡಿದ್ದ ಅನೇಕ ಕೊಡುಗೆಗಳನ್ನು ಬಜೆಟ್‌ನಲ್ಲಿ ಕಿತ್ತುಕೊಂಡಿದ್ದಾರೆ. ಹಿಂದಿನ ಸರ್ಕಾರ ಬಜೆಟ್‌ನಲ್ಲಿ ಪಾಲಿಕೆಗೆ ಘನತ್ಯಾಜ್ಯ ನಿರ್ವಹಣೆಗೆ ನೀಡಿದ್ದ ನೂರು ಕೋಟಿ ರುಪಾಯಿಗಳನ್ನು, ಧಾರವಾಡ ಈಜುಗೊಳ ಅಭಿವೃದ್ಧಿಗಾಗಿ ತಲಾ 7.5 ಕೋಟಿ ಹಂಚಿಕೆ ಮಾಡಿತ್ತು. ಅಲ್ಲದೇ, ನಿರಂತರ ನೀರು ಯೋಜನೆಗೆ ಹಣ ತೆಗೆದಿರಿಸಲಾಗಿತ್ತು. ಆದರೆ, ಈ ಯೋಜನೆಗಳನ್ನು ಕೈ ಬಿಟ್ಟಿರುವುದು ಅವಳಿ ನಗರದ ಜನತೆಗೆ ನಿರಾಸೆ ಉಂಟು ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.