ಧಾರವಾಡ

ಪ್ರೋತ್ಸಾಹ ಧನ ನೀಡಲು ಆಗ್ರಹ

Published On :

ಧಾರವಾಡ:  ಆಶಾ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ಪ್ರೋತ್ಸಾಹ ಧನ ನೀಡಬೇಕು, ಲಸಿಕೆ ದಡಾರ ಮತ್ತಿತರ ಚಿಕ್ಕಮಕ್ಕಳ ಕಾಯಿಲೆಗೆ ನೀಡಬೇಕಾದ 2011-12ರ ಬಾಕಿ ಪ್ರೋತ್ಸಾಹ ಧನವನ್ನು ಕೂಡಲೇ ಬಿಡುಗಡೆ ಮಾಡಬೇಕು. ದಾಖಲಾತಿ ನಿರ್ವಹಣೆ ಹಣದಲ್ಲಿ ಆಗಿರುವ ಅವ್ಯವಸ್ಥೆಯನ್ನು ಸರಿಪಡಿಸುವುದು ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘಟನೆ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯ ಕಾರ್ಯಕ್ರಮ ನಿರ್ವಹಣಾಧಿಕಾರಿಯನ್ನು ಒತ್ತಾಯಿದೆ.  ಇದಕ್ಕೆ ಸ್ಪಂದಿಸಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಅಂಗಡಿ, 15 ದಿನಗಳಲ್ಲಿ ಲಸಿಕೆ, ದಡಾರ ಮತ್ತಿತರ ಚಿಕ್ಕಮಕ್ಕಳ ಕಾಯಿಲೆಗೆ ನೀಡಬೇಕಾದ ಬಾಕಿ ಪ್ರೋತ್ಸಾಹ ಧನವನ್ನು ಬಿಡುಗಡೆ ಮಾಡಲಾಗುವುದು. ದಾಖಲಾತಿ ನಿರ್ವಹಣೆ ಹಣ ಒಂದು ಸಾವಿರ ರೂಪಾಯಿಯನ್ನು ಕೂಡಲೇ ಆಶಾ ಕಾರ್ಯಕರ್ತರಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುವುದು. ಪ್ರತಿ ತಿಂಗಳೂ ಪ್ರೋತ್ಸಾಹ ಧನವನ್ನು ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಸಂಘಟನೆಯ ಜಿಲ್ಲಾಧ್ಯಕ್ಷ ಎಚ್.ಜಿ. ದೇಸಾಯಿ ಸೇರಿದಂತೆ ನಿಯೋಗದಲ್ಲಿ ಗೌರಮ್ಮ ಪಾಗದ, ರೇಣುಕಾ ಹನಸಿ, ಶಾಂತಾ ಚೌಹಾಣ, ಗಿರಿಜಾ ಹಿರೇಮಠ, ಪ್ರೇಮಾ ದಿವಟಗಿರಿ, ಯಲ್ಲವ್ವ ಕಾಳೆ, ಯಶೋದಾ ಹುರಳಿಗೌಡರ, ಬಾಳವ್ವ ಕುಂಬಾರ, ಶೋಭಾ ಹಿರೇಮಠ ಇದ್ದರು.
ಉದ್ಯೋಗಕ್ಕಾಗಿ ಖರ್ಗೆಗೆ ಆಗ್ರಹ
ಧಾರವಾಡ: ಹುಬ್ಬಳ್ಳಿ-ಅಂಕೋಲಾ ಬ್ರಾಡ್‌ಗೇಜ್ ರೈಲು ಮಾರ್ಗ ನಿರ್ಮಾಣಕ್ಕೆ ಭೂಸ್ವಾಧೀನಕ್ಕೆ ಒಳಪಟ್ಟ ಹುಬ್ಬಳ್ಳಿ ಹಾಗೂ ಕಲಘಟಗಿ ತಾಲೂಕಿನ ಗ್ರಾಮಗಳ ರೈತರ ಕುಟುಂಬ ವರ್ಗಗಳಲ್ಲಿನ ಅರ್ಹರಿಗೆ ನೈಋತ್ಯ ರೇಲ್ವೆಯಲ್ಲಿ ಖಾಯಂ ನೌಕರಿ ನೀಡಬೇಕೆಂದು ನ್ಯಾಯವಾದಿ ಕೆ.ಎಸ್. ಕೋರಿಶೆಟ್ಟರ್ ಕೇಂದ್ರ ರೇಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಗ್ರಹಿಸಿದ್ದಾರೆ. ಸಾರ್ವಜನಿಕ ಉದ್ದೇಶಕ್ಕಾಗಿ ಭೂಮಿ ಕಳೆದುಕೊಂಡ ರೈತ ಕುಟುಂಬಗಳು ಕೂಲಿ ನಾಲಿ ಮಾಡುತ್ತಿದ್ದಾರೆ. ಮಾನವೀಯತೆ ಆಧಾರದ ಮೇಲೆ ಖರ್ಗೆ ಅವರು ಕ್ರಮ ತೆಗೆದುಕೊಳ್ಳಬೇಕೆಂದು ಕೋರಿಶೆಟ್ಟರ್ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.