ಪಾಲಿಕೆ ಆಯುಕ್ತರಾಗಿ ರಮಣದೀಪ ಚೌಧರಿ
ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಜು. 17
ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಐಎಎಸ್ ಅಧಿಕಾರಿ ರಮಣದೀಪ ಚೌಧರಿ ನೇಮಕಗೊಂಡಿದ್ದಾರೆ.
2008ನೇ ಸಾಲಿನ ಐಎಎಸ್ ಅಧಿಕಾರಿಯಾಗಿರುವ ರಮಣದೀಪ ಚೌಧರಿ ಅವರನ್ನು ಹು-ಧಾ ಪಾಲಿಕೆ ಆಯುಕ್ತರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. 32 ವಯಸ್ಸಿನ ರಮಣದೀಪ ಚೌಧರಿ ಅವರು ಇದಕ್ಕೂ ಮೊದಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಹೆಚ್ಚುವರಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. ರಮಣದೀಪ ಚೌಧರಿ ಅವರು ಮೂಲತಃ ಪಂಜಾಬನ ಜಲಂಧರ ಪ್ರದೇಶದವರು.
ರಮಣದೀಪ ಚೌಧರಿ ಅವರ ಪತ್ನಿ ಖುಷ್ಬು ಗೋಯಲ್ ಚೌಧರಿ ಅವರು ಸಹ ಐಎಎಸ್ ಅಧಿಕಾರಿಯಾಗಿದ್ದು, ರಾಜ್ಯ ಸರ್ಕಾರ ಅವರನ್ನು ವಾಯವ್ಯ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿಯನ್ನಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದೆ. ಖುಷ್ಬು ಚೌಧರಿ ಅವರು ಸಹ 2008ನೇ ಸಾಲಿನ ಐಎಎಸ್ ಅಧಿಕಾರಿ. ಇವರು ಸಹ ಮೂಲತಃ ಪಂಜಾಬನ ಜಲಂದರ್‌ದವರು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಐಎಎಸ್ ಅಧಿಕಾರಿಯನ್ನೇ ಆಯುಕ್ತರನ್ನಾಗಿ ನೇಮಿಸಬೇಕೆಂದು ಪಾಲಿಕೆಯ ಕಾಂಗ್ರೆಸ್ ಸದಸ್ಯರು ಹಾಗೂ ಕೆಲ ಸ್ಥಳೀಯ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸುತ್ತ ಬಂದಿದ್ದವು. ಈ ಹಿಂದೆ ಪಾಲಿಕೆ ಆಯುಕ್ತರಾಗಿದ್ದ ಐಎಎಸ್ ಅಧಿಕಾರಿ ಡಾ. ಕೆ.ವಿ. ತ್ರಿಲೋಕಚಂದ್ರ ವರ್ಗಾವಣೆ ನಂತರ ಹಿರಿಯ ಕೆಎಎಸ್ ಅಧಿಕಾರಿ ವೈ.ಎಸ್. ಪಾಟೀಲ ಅವರನ್ನು ಸರ್ಕಾರ ಪಾಲಿಕೆ ಆಯುಕ್ತರನ್ನಾಗಿ ನೇಮಿಸಿತ್ತು. ಕಳೆದ ತಿಂಗಳು ವೈ.ಎಸ್. ಪಾಟೀಲ ವರ್ಗಾವಣೆಗೊಂಡ ನಂತರ ಸರ್ಕಾರ ತೆರವಾದ ಆಯುಕ್ತ ಹುದ್ದೆಗೆ ಅಧಿಕಾರಿಯನ್ನು ನೇಮಿಸಲು ವಿಳಂಬ ಮಾಡಿತ್ತು. ಹು-ಧಾ ಪಾಲಿಕೆಗೆ ಐಎಎಸ್ ಅಧಿಕಾರಿಯನ್ನೇ ನೇಮಿಸಬೇಕೆಂಬ ಒತ್ತಡ ಸ್ಥಳೀಯ ಮುಖಂಡರದ್ದಾಗಿದ್ದರಿಂದ ಐಎಎಸ್ ಅಧಿಕಾರಿ ರಮಣದೀಪ ಚೌಧರಿ ಅವರನ್ನು ಆಯುಕ್ತರನ್ನಾಗಿ ಆದೇಶ ಹೊರಡಿಸಿದೆ. ಇದರೊಂದಿಗೆ ಅವರ ಪತ್ನಿ ಐಎಎಸ್ ಅಧಿಕಾರಿ ಖುಷ್ಬು ಚೌಧರಿ ಅವರನ್ನು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿಯನ್ನಾಗಿ ವರ್ಗಾವಣೆಗೊಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

