ವಿದ್ಯಾರ್ಥಿಗಳಿಗೆ ಕಬ್ಬಿಣಾಂಶದ ಮಾತ್ರೆ ವಿತರಣೆ
ಕನ್ನಡಪ್ರಭ ವಾರ್ತೆ, ಕಲಘಟಗಿ, ಜು. 18
ಆರೋಗ್ಯದ ಸಾಮಾನ್ಯ ಸಮಸ್ಯೆಗಳಲ್ಲೊಂದಾದ ರಕ್ತಹೀನತೆಯನ್ನು ಹೋಗಲಾಡಿಸಲು ವಿದ್ಯಾರ್ಥಿಗಳಿಗೆ ಕಬ್ಬಿಣಾಂಶದ ಮಾತ್ರೆಗಳನ್ನು ವಿತರಿಸಲಾಗುತ್ತಿದ್ದು, ಆರೋಗ್ಯ ಭಾರತದ ನಿರ್ಮಾಣಕ್ಕೆ ಇದು ಸಹಕಾರಿಯಾಗಲಿದೆ ಎಂದು ತಾಪಂ ಅಧ್ಯಕ್ಷ ಬಸವಣ್ಣಯ್ಯ ಹಿರೇಮಠ ನುಡಿದರು.
ಅವರು ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸುವರ್ಣ ಆರೋಗ್ಯ ಚೈತನ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 6ನೇ ತರಗತಿಯಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಈ ಮಾತ್ರೆಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ ಎಂದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಜಿಪಂ ಸದಸ್ಯ ಬಸವರಾಜ ಕರಡಿಕೊಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಮಾಳಗಿ ಇದ್ದರು. ಅಧ್ಯಕ್ಷತೆಯನ್ನು ತಾಪಂ ಕಾರ್ಯನಿರ್ವಹಣಾಧಿಕಾರಿ ಎಸ್.ಆರ್. ವಿರಕರ ವಹಿಸಿದ್ದರು. ವೈದ್ಯಾಧಿಕಾರಿ ರತ್ನಮಾಲಿನಿ, ಸಚಿವ ಸಂತೋಷ ಲಾಡ್ ಅವರ ಆಪ್ತ ಸಹಾಯಕ ಸೋಮಶೇಖರ ಬೆನ್ನೂರ, ಶಾಲಾ ಮಕ್ಕಳ ಉಪಾಹಾರ ಯೋಜನೆಯ ಅಧಿಕಾರಿ ಎ.ಎ. ಬೆಣ್ಣಿ, ಶಾಲಾ ಸುಧಾರಣಾ ಸಮಿತಿ ಅಧ್ಯಕ್ಷ ಶಿವಾಜಪ್ಪ ವಾಗ್ಮೋಡೆ, ವಿನೋದ ಢವಳೆ, ರಾಮಕೃಷ್ಣ ಮಸಳೆ, ಬಸವರಾಜ ಚಳಮಟ್ಟಿ, ಶಿಕ್ಷಣ ಸಂಯೋಜಕ ಸಿ.ಸಿ. ಅಳಗೋಡಿ, ಕೆ.ವೈ. ಗಂಜಿಗಟ್ಟಿ, ಎಸ್.ಎಸ್. ಖಾದ್ರಿ ಇದ್ದರು. ಎಸ್.ಎಂ. ಮಾಕಣ್ಣವರ ಸ್ವಾಗತಿಸಿದರು, ಎಸ್.ಎ. ಚಿಕ್ಕನರ್ತಿ ನಿರೂಪಿಸಿ, ಸಿ.ಸಿ. ಅಳಗೋಡಿ ವಂದಿಸಿದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

