ಕ್ಯಾರಿಓವರ್ ಕೈಬಿಡುವಂತೆ ಒತ್ತಾಯಿಸಿ ಪ್ರತಿಭಟನೆ
ಹುಬ್ಬಳ್ಳಿ: ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರಸಕ್ತ ಸಾಲಿನಿಂದ ಜಾರಿಗೆ ತರಲಾದ ಕ್ಯಾರಿಓವರ್-04 ಪದ್ಧತಿ ಕೈಬಿಡುವಂತೆ ಒತ್ತಾಯಿಸಿ ಸಮತಾ ಸೇನಾ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಸ್ಟೇಶನ್ ರಸ್ತೆಯ ಡಾ. ಅಂಬೇಡ್ಕರ್ ವೃತ್ತದಿಂದ ತಹಸೀಲ್ದಾರ್ ಕಚೇರಿವರೆಗೆ ಮೆರವಣಿಗೆಯಲ್ಲಿ ತೆರಳಿದ ಪ್ರತಿಭಟನಾಕಾರರು, ತಹಸೀಲ್ದಾರ್ ಕಚೇರಿ ಅಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.
ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಸದ್ಯ ಜಾರಿಗೆ ತಂದಿರುವ ನೂತನ ಪದ್ಧತಿ ಬದಲಾಗಿ ಹಿಂದಿನ ಕ್ಯಾರಿಓವರ್ ಪದ್ಧತಿಯನ್ನೇ ಮುಂದುವರೆಸಿಕೊಂಡು ಹೋಗುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
ಹೊಸ ಕ್ಯಾರಿಓವರ್-04 ನಿಂದಾಗಿ ಈ ವರ್ಷ ಶೇ. 70ಕ್ಕೂ ಅಧಿಕ ವಿದ್ಯಾರ್ಥಿಗಳು ಮುಂದಿನ ವ್ಯಾಸಂಗ ವರ್ಷಕ್ಕೆ ಪ್ರವೇಶ ಪಡೆಯದೇ ಹೊರಗೆ ಉಳಿಯುವ ಪ್ರಸಂಗ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಸೇನಾ ರಾಜ್ಯಾಧ್ಯಕ್ಷ ಗುರುನಾಥ ಉಳ್ಳಿಕಾಶಿ, ಅಶೋಕ ಕಾಶೇನವರ, ಸೋಮಶೇಖರ ಚಲವಾದಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

