ಧಾರವಾಡ

ಇಂದು ನಿರುದ್ಯೋಗಿ ಪದವೀಧರರ ರ್ಯಾಲಿ

Published On :

ಧಾರವಾಡ:  ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಿಕೊಳ್ಳಬೇಕೆಂದು ಒತ್ತಾಯಿಸಿ ಜು. 20ರಂದು ಬೆಳಗ್ಗೆ 10.30ಕ್ಕೆ ಇಲ್ಲಿನ ಕಲಾಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರಾಜ್ಯ ನಿರುದ್ಯೋಗಿ ಪದವೀಧರರ ಹೋರಾಟ ಸಮಿತಿ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದೆ. ಈ ರ್ಯಾಲಿಯಲ್ಲಿ ಪಾಲಿಕೆಯ ಸದಸ್ಯ ಶಿವು ಹಿರೇಮಠ, ತಾಯಪ್ಪ ಪವಾರ, ಭೀಮನಗೌಡ ಬಿರಾದಾರ, ಮೃತ್ಯುಂಜಯ ಹೊಂಗಲಮಠ, ಮೈನುದ್ದೀನ ಅಂಗಡಿ, ಸಂಗಪ್ಪ ಗದ್ದಿನಕೇರಿ, ಮಹಾಂತೇಶ ಬಿ.ಕೆ., ಶಿವಪುತ್ರ, ರವೀಂದ್ರ ಬಿರಾದಾರ ಭಾಗವಹಿಸಲಿದ್ದಾರೆ. ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಸಾವಿರಾರು ಹುದ್ದೆಗಳು ಖಾಲಿ ಇವೆ. ಆದರೆ, ಸರ್ಕಾರ ಕಳೆದ ನಾಲ್ಕೈದು ವರ್ಷಗಳಿಂದ ಸಮರ್ಪಕವಾಗಿ ಹುದ್ದೆಗಳನ್ನು ಭರ್ತಿ ಮಾಡಿಕೊಂಡಿಲ್ಲ. ಅಲ್ಲದೇ, ಕೆಲ ಕಡೆಗಳಲ್ಲಿ ನೇಮಕಾತಿ ನಡೆಸಿದೆ. ಆ ನೇಮಕಾತಿಗಳಲ್ಲಿ ಅಕ್ರಮವಾಗಿದ್ದು, ಅರ್ಹ ಅಭ್ಯರ್ಥಿಗಳಿಗೆ ತುಂಬಲಾರದ ನಷ್ಟವಾಗಿದೆ. ಆದ್ದರಿಂದ ಸರ್ಕಾರದ ಈ ಕ್ರಮವನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.