ಧಾರವಾಡ

ಖಾಲಿ ಹುದ್ದೆ ಭರ್ತಿಗಾಗಿ ರಾಜ್ಯ ನಿರುದ್ಯೋಗಿ ಪದವೀಧರರ ಹೋರಾಟ ಸಮಿತಿ ಪ್ರತಿಭಟನೆ

Published On :

ಧಾರವಾಡ: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಿಕೊಳ್ಳಬೇಕೆಂದು ಒತ್ತಾಯಿಸಿ ರಾಜ್ಯ ನಿರುದ್ಯೋಗಿ ಪದವೀಧರರ ಹೋರಾಟ ಸಮಿತಿ ಶನಿವಾರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿತು.
ಇಲ್ಲಿನ ಕಲಾಭವನದಿಂದ ಆರಂಭವಾದ ಪ್ರತಿಭಟನಾ ರ್ಯಾಲಿ ಜಿಲ್ಲಾಧಿಕಾರಿ ಕಚೇರಿವರೆಗೆ ಸಂಚರಿಸಿತು. ರಾಜ್ಯ ಸರ್ಕಾರ ಕಳೆದ ನಾಲ್ಕೈದು ವರ್ಷಗಳಿಂದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಸರ್ಮಪಕವಾಗಿ ಭರ್ತಿ ಮಾಡಿಕೊಂಡಿಲ್ಲ. ಸರ್ಕಾರ ಕೆಲವೊಂದಿಷ್ಟು ಇಲಾಖೆಗಳಲ್ಲಿ ಕೆಪಿಎಸ್ಸಿ ಮೂಲಕ ನೇಮಕಾತಿ ಮಾಡಿಕೊಂಡಿದೆ. ಸರ್ಕಾರ ನೇಮಕಾತಿ ಮಾಡಿಕೊಂಡ ಈ ನೇಮಕಾತಿಯಲ್ಲಿ ಅಕ್ರಮವಾಗಿದೆ. ಇದರಿಂದ ಅರ್ಹ ಅಭ್ಯರ್ಥಿಗಳಿಗೆ ನೇಮಕಾತಿಯಲ್ಲಿ ಅನ್ಯಾಯವಾಗಿದೆ. ಸರ್ಕಾರ ಈ ಕೂಡಲೇ ಇಲಾಖೆಯಲ್ಲಿ ಖಾಲಿರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುಬೇಕು. ನೇಮಕಾತಿ ಸಂದರ್ಭದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಬೇಕು. ಪ್ರಸ್ತುತ ಜಾರಿಯಲ್ಲಿರುವ ಅವೈಜ್ಞಾನಿಕ ನೇಮಕಾತಿ ವಿಧಾನ ಕೈಬಿಡಬೇಕೆಂದು ಹೋರಾಟದ ನೇತೃತ್ವ ವಹಿಸಿದ್ದ ಪಾಲಿಕೆ ಸದಸ್ಯ ಶಿವು ಹಿರೇಮಠ ಆಗ್ರಹಿಸಿದರು.
ಮೃತ್ಯುಂಜಯ ಹೊಂಗಲಮಠ, ತಾಯಪ್ಪ ಪವಾರ, ಮಹಾಂತೇಶ ಬಿ.ಕೆ., ಶಿವಪುತ್ರ, ರವೀಂದ್ರ ಬಿರಾದಾರ, ಮೈನುದ್ದೀನ ಅಂಗಡಿ, ಸಂಗಪ್ಪ ಗದ್ದಿನಕೇರಿ, ಭೀಮನಗೌಡ ಬಿರಾದಾರ, ಶಿವಸೋಮಣ್ಣ ನಿಟ್ಟೂರ, ಪ್ರೇಮಕುಮಾರ, ಗಣೇಶ ಹಾವನೂರ, ಹೊನ್ನೇಶ ಕೆ, ಸಿದ್ದು ಜ್ಯಾಲಗೋಳ, ಮಹಾಂತೇಶ ಖೋತಾ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.