ಎಪಿಎಂಸಿ ಆಡಳಿತ ಕಚೇರಿ ಕಟ್ಟಡಕ್ಕೆ ಅಡಿಗಲ್ಲು
ಧಾರವಾಡ: ಧಾರವಾಡದ ಕೃಷಿ ಉತ್ಪನ್ನ ಮಾರುಕಟ್ಟೆ ಆಡಳಿತ ವ್ಯವಸ್ಥೆ ಸುಧಾರಿಸದಿದ್ದರೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಶಾಸಕ ವಿನಯ ಕುಲಕರ್ಣಿ ಎಚ್ಚರಿಸಿದ್ದಾರೆ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಿಂದ ಮಹಾಂತ ಸ್ವಾಮಿಗಳ ಹೊಸ ಮಾರುಕಟ್ಟೆ ಪ್ರಾಂಗಣದಲ್ಲಿ ಶನಿವಾರ ನಡೆದ ಆಡಳಿತ ಕಚೇರಿ ಕಟ್ಟಡ ನಿರ್ಮಾಣದ ಅಡಿಗಲ್ಲು ಸಮಾರಂಭದ ಉದ್ಘಾಟನೆಯಲ್ಲಿ ಮಾತನಾಡಿದ ಅವರು, ಎಪಿಎಂಸಿಯಲ್ಲಿ ಅಧಿಕಾರಿಗಳು ರೈತಪರ ಕೆಲಸ ಮಾಡುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ. ಇತ್ತೀಚೆಗೆ ಬಟಾಣಿ ಬೆಲೆ ಹಾಗೂ ತೂಕದ ವಿಷಯದಲ್ಲಿ ರೈತರು ಪ್ರತಿಭಟಿಸಿದ್ದಾರೆ. ರೈತರಿಗಾಗಿ ಸಮರ್ಪಕ ಕೆಲಸ ನಿರ್ವಹಿಸದಿದ್ದಲ್ಲಿ ಅಂತಹ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು. ಯಾರೊಬ್ಬರಿಗೂ ಅನ್ಯಾಯವಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದರು. ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಎಪಿಎಂಸಿ ಆಡಳಿತ ಮಂಡಳಿ ಸದಸ್ಯ ಶಿವಶಂಕರ ಹಂಪಣ್ಣವರ ಪ್ರಾಸ್ತಾವಿಕ ಮಾತನಾಡಿದರು. ಅಧ್ಯಕ್ಷ ಮಲ್ಲೇಶಪ್ಪ ಹೊಸೂರ, ಉಪಾಧ್ಯಕ್ಷ ವಿಠ್ಠಲ ಪೀರಗಾರ, ಪಾಲಿಕೆ ಸದಸ್ಯರಾದ ದೀಪಕ ಚಿಂಚೋರೆ, ಯಾಸೀನ್ ಹಾವೇರಪೇಟ, ಎಪಿಎಂಸಿ ಮಾಜಿ ಅಧ್ಯಕ್ಷ ಬಸವರಾಜ ರೋಣದ, ವಿಜಯಕುಮಾರ ಕುರಕುರಿ, ದಾದಾಸಾಹೇಬ ದೇಸಾಯಿ, ಪಾರ್ಶ್ವನಾಥ ಪತ್ರಾವಳಿ ಇದ್ದರು. ರಮೇಶ ತಳಿಗೇರಿ ಸ್ವಾಗತಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

