ಧಾರವಾಡ

ಗಂಗೂಬಾಯಿ, ಬಸವರಾಜ ರಾಜಗುರು ಪುಣ್ಯಸ್ಮರಣೆ

Published On :

ಧಾರವಾಡ:  ಖ್ಯಾತ ಹಿಂದುಸ್ತಾನಿ ಗಾಯಕಿ ಡಾ. ಗಂಗೂಬಾಯಿ ಹಾನಗಲ್ ಅವರ 4ನೇ ಮತ್ತು ಪಂ.ಬಸವರಾಜ ರಾಜಗುರು ಅವರ 22ನೇ ಪುಣ್ಯಸ್ಮರಣೆಯು ಭಾನುವಾರ ಹೊಸಯಲ್ಲಾಪುರದಲ್ಲಿ ನಡೆಯಿತು.
ಡಾ. ಗಂಗೂಬಾಯಿ ಹಾನಗಲ್ಲ ಟ್ರಸ್ಟ್ ಅಧ್ಯಕ್ಷ, ಜಿಲ್ಲಾಧಿಕಾರಿ ಸಮೀರ ಶುಕ್ಲಾ, ಡಾ. ಗಂಗೂಬಾಯಿ ಹಾನಗಲ್ ಅವರ ಭಾವಚಿತ್ರಕ್ಕೆ ಹಾಗೂ ಪಂ.ಬಸವರಾಜ ರಾಜಗುರು ಅವರ ಸಮಾಧಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಮೀರ ಶುಕ್ಲಾ, ಪಂ.ಬಸವರಾಜ ರಾಜಗುರು ಟ್ರಸ್ಟ್ ವತಿಯಿಂದ ಸಂಗೀತ ಶಾಲೆ ಆರಂಭಿಸಲಾಗಿದೆ. ಕಳೆದ ವರ್ಷ ಭರವಸೆ ನೀಡಿದಂತೆ ಡಾ. ಗಂಗೂಬಾಯಿ ಹಾನಗಲ್ ಅವರು ಜನಿಸಿದ ಮನೆಯಲ್ಲಿಯೂ ಹಿಂದುಸ್ತಾನಿ ಸಂಗೀತ ಶಾಲೆ ಕಳೆದ ಜು. 1ರಿಂದ ಆರಂಭಿಸಲಾಗಿದೆ. ಸಂಗೀತ ಶಾಲೆಯಲ್ಲಿ 15 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದು, ಪಂ. ಶೇಷಗಿರಿ ಗುಡಿ ಅವರು ಸಂಗೀತ ಶಿಕ್ಷಣ ಬೋಧಿಸುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಡಾ. ಗಂಗೂಬಾಯಿ ಹಾನಗಲ್ ಮತ್ತು ಪಂ. ಬಸವರಾಜ ರಾಜಗುರು ಅವರ ಸ್ಮರಣೆಗಾಗಿ ಹಲವಾರು ಸಂಗೀತ ಕಾರ್ಯಕ್ರಮ ಆಯೋಜಿಸುವುದಾಗಿ ಹೇಳಿದರು. ಶಾಸಕ ವಿನಯ ಕುಲಕರ್ಣಿ, ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ, ಮಹಾನಗರ ಪಾಲಿಕೆ ಸದಸ್ಯ ಶಂಕರ ಶೇಳಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬಿ.ಡಿ. ಹಿರೇಗೌಡರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.