ಕುಸುಮಾ ದೇಶಪಾಂಡೆಗೆ ಸನ್ಮಾನ
ಧಾರವಾಡ: ಇಲ್ಲಿಯ ಕರ್ನಾಟಕ ವಿದ್ಯಾವರ್ಧಕ ಸಂಘದ 124ನೇ ಸಂಸ್ಥಾಪನಾ ದಿನಾಚರಣೆ ನಿಮಿತ್ತ ಶಿಕ್ಷಣ ಕ್ಷೇತ್ರದಲ್ಲಿ ಸ್ಮರಣೀಯ ಸೇವೆ ಸಲ್ಲಿಸಿದ ಇಲ್ಲಿಯ ಶಾರದಾ ಹೈಸ್ಕೂಲಿನ ನಿವೃತ್ತ ಮುಖ್ಯೋಪಾಧ್ಯಾಯಿನಿ ಕುಸುಮಾ ದೇಶಪಾಂಡೆ ಅವರನ್ನು ಸಂಘದ ಪರವಾಗಿ ಅವರ ಮನೆಯಲ್ಲೇ ಸತ್ಕರಿಸಲಾಯಿತು. ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಸದಸ್ಯರೆಲ್ಲರೂ ಸನ್ಮಾನಕ್ಕೆ ಅರ್ಹರಾಗಿದ್ದಾರೆ. ನಾನು ಸಲ್ಲಿಸಿದ ಸೇವೆಯನ್ನು ಗುರುತಿಸಿದ ಸಂಘದ ಪದಾಧಿಕಾರಿಗಳಿಗೆ ನಾನು ಋಣಿಯಾಗಿದ್ದೇನೆ ಎಂದು ಕುಸುಮಾ ತಾಯಿ ನುಡಿದರು. ಈ ಸಂದರ್ಭದಲ್ಲಿ ಕರ್ನಾಟಕ ವಿವಿ ನಿವೃತ್ತ ಗ್ರಂಥಪಾಲಕ, ಸಂಘದ ಹಿಂದಿನ ಕಾರ್ಯಾಧ್ಯಕ್ಷ ಡಾ. ಕೆ.ಎಸ್. ದೇಶಪಾಂಡೆ ಮಾತನಾಡಿ, ಸಮಾಜದ ವಿವಿಧ ರಂಗಗಳಲ್ಲಿ ಗಣನೀಯ, ಸ್ಮರಣೀಯ ಸೇವೆ ಸಲ್ಲಿಸಿದವರ ಸೇವೆಯನ್ನು ಗುರುತಿಸಿ ಗೌರವಿಸುತ್ತಿರುವುದು ಸ್ತುತ್ಯಾ ರ್ಹ ಕಾರ್ಯ. ಸಂಘದ ಅಧ್ಯಕ್ಷ ನಾಡೋಜ ಡಾ. ಪಾಟೀಲ ಪುಟ್ಟಪ್ಪನವರ ನೇತೃತ್ವದಲ್ಲಿ ಕನ್ನಡ ಸಾಂಸ್ಕೃತಿಕ ಲೋಕದಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘವು ಮಾಡುತ್ತಿರುವ ಕಾರ್ಯಕ್ರಮಗಳು ಎಂದಿಗೂ ನೆನಪಿಡುವಂತಹವು ಎಂದರು. ಸಂಘದ ಕೋಶಾಧ್ಯಕ್ಷ ಕೃಷ್ಣ ಜೋಶಿ, ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ, ಅಧೀಕ್ಷಕ ಎಸ್.ಎಂ. ರಾಚಯ್ಯ, ಲೆಕ್ಕಿಗ ಎನ್.ಎಸ್. ಕಾಶಪ್ಪನವರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

