ಸುದ್ದಿ ಸಂಕ್ಷೇಪ
ಪಠ್ಯಕ್ರಮ ಕುರಿತ ತರಬೇತಿ
ಧಾರವಾಡ: ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಪ್ರಥಮ ಪಿಯುಸಿಗೆ ಪರಿಷ್ಕೃತ ಪಠ್ಯಕ್ರಮ ಜಾರಿಗೊಳ್ಳಲಿದೆ. ಈ ಕುರಿತಂತೆ ಜು. 24ರಿಂದ ಆ. 16ರ ವರೆಗೆ ಒಟ್ಟು 18 ದಿನಗಳ ಕಾಲ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಧಾರವಾಡ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆವರಣದಲ್ಲಿರುವ ಬಿಆರ್ಸಿ ಕೇಂದ್ರದಲ್ಲಿ ದೂರ ಸಂಪರ್ಕ ಉಪಗ್ರಹ ಆಧಾರಿತ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸಂಬಂಧಿತ ಕಾಲೇಜುಗಳ ಪ್ರಾಚಾರ್ಯರು ಕಚೇರಿ ಸಂಪರ್ಕಿಸಿ, ತರಬೇತಿ ವಿವರ ಪಡೆದು ಕ್ರಮ ಜರುಗಿಸಲು ಪದವಿ ಪೂರ್ವ ಶಿಕ್ಷಣ ಪ್ರಭಾರ ಉಪನಿರ್ದೇಶಕಿ ಶೈಲಜಾ ಗಾಂವಕರ ತಿಳಿಸಿದ್ದಾರೆ.
ಲೆಕ್ಕ ಪರಿಶೋಧನೆಗೆ ಸೂಚನೆ
ಧಾರವಾಡ: ಸಹಕಾರ ಸಂಘಗಳ ಲೆಕ್ಕ ಪರಿಶೋಧನೆಗೆ ಸಂಬಂಧಿಸಿದಂತೆ ರಾಜ್ಯ ಉಚ್ಚ ನ್ಯಾಯಾಲಯ ಜು. 5ರಂದು ತೀರ್ಪು ನೀಡಿದೆ. ಅದರನ್ವಯ ಸಹಕಾರ ಸಂಘಗಳು ಇಲಾಖೆ ಪ್ರಕಟಿಸಿರುವ ಅರ್ಹ ಲೆಕ್ಕ ಪರಿಶೋಧಕರ ಪಟ್ಟಿಯಿಂದ ಒಬ್ಬರನ್ನು ಆಯ್ಕೆ ಮಾಡಿಕೊಂಡು ಕಳೆದ ಸಾಲಿನ ಲೆಕ್ಕ ಪರಿಶೋಧನೆ ಕಾರ್ಯವನ್ನು ಆ. 31ರೊಳಗೆ ಪೂರೈಸಿ ವರದಿ ಸಲ್ಲಿಸಬೇಕು. ಈ ಕುರಿತು ಹೆಚ್ಚಿನ ಮಾಹಿತಿಗೆ ಸಂಪರ್ಕಿಸಲು ಜಿಲ್ಲಾ ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಉಪನಿರ್ದೇಶಕರು (0836-2447331) ತಿಳಿಸಿದ್ದಾರೆ.
ಎಂಜಿನಿಯರಿಂಗ್ ತರಬೇತಿ
ಧಾರವಾಡ: ಹಿಂದುಳಿದ ವರ್ಗಗಳ ನಿರುದ್ಯೋಗಿಗಳಿಗೆ ಮೈಸೂರಿನ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಪ್ಲಾಸ್ಟಿಕ್ ಎಂಜಿನಿಯರಿಂಗ್ ಸಂಸ್ಥೆ ಆರು ತಿಂಗಳ ಅವಧಿಯ ವಿವಿಧ ಕೋರ್ಸ್ಗಳಲ್ಲಿ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಧಾರವಾಡ ಮಿನಿ ವಿಧಾನಸೌಧದಲ್ಲಿರುವ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿ ಸಂಪರ್ಕಿಸಬೇಕು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

