ಕಿಮ್ಸ್ ನಿರ್ದೇಶಕರಾಗಿ ಡಾ. ಹಂಗರಗಾ ನೇಮಕ
ಹುಬ್ಬಳ್ಳಿ: ಹಠಾತ್ ಬೆಳವಣಿಗೆಯೊಂದರಲ್ಲಿ ಇಲ್ಲಿಯ ಕಿಮ್ಸ್ ನಿರ್ದೇಶಕ ಸ್ಥಾನದಿಂದ ಡಾ. ವಸಂತಾ ಕಾಮತ್ ಅವರನ್ನು ಬಿಡುಗಡೆಗೊಳಿಸಿರುವ ಸರ್ಕಾರ ಈ ಸ್ಥಾನಕ್ಕೆ ಪ್ರಭಾರಿ ನಿರ್ದೇಶಕರನ್ನಾಗಿ ಡಾ. ಯು. ಎಸ್. ಹಂಗರಗಾ ಅವರನ್ನು ನೇಮಿಸಿ ಆದೇಶಿಸಿದೆ. 60 ವರ್ಷ ವಯಸ್ಸು ಮೇಲ್ಪಟ್ಟವರು ನಿರ್ದೇಶಕ ಸ್ಥಾನದಲ್ಲಿರಬಾರದು ಎಂಬ ಸರ್ಕಾರದ ಸೂಚನೆಯ ಹಿನ್ನೆಲೆಯಲ್ಲಿ ವಸಂತಾ ಕಾಮತ್ ಅವರನ್ನು ನಿರ್ದೇಶಕಿ ಸ್ಥಾನದಿಂದ ಬಿಡುಗಡೆಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ. ಆದರೂ, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರೊಂದಿಗೆ ಮಾಡಿಕೊಂಡಿದ್ದ ಕಿರಿಕ್ನಿಂದಾಗಿಯೇ ಆದ ತಲೆದಂಡ ಎಂದು ವ್ಯಾಖ್ಯಾನಿಸಲಾಗುತ್ತಿದೆ. ಹಂಗರಗಾ ಅವರನ್ನು ನಿರ್ದೇಶಕರನ್ನಾಗಿ ನೇಮಿಸಲಾಗಿದೆ ಎಂದು ಕಿಮ್ಸ್ ಸಿಇಒ ಕಚೇರಿಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಫಾಕ್ಸ್ ಮೂಲಕ ಮಾಹಿತಿ ರವಾನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

